ನವದೆಹಲಿ: ಭಾರತವು 2021ರ ಬ್ರಿಕ್ಸ್ ಅಧ್ಯಕ್ಷನಾಗಿರುವ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಈ ತಿಂಗಳ 9ರಂದು ನಡೆಯಲಿರುವ 13 ನೇ ಬ್ರಿಕ್ಸ್ ಶೃಂಗಸಭೆಯ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ವರ್ಚುವಲ್ ರೂಪದಲ್ಲಿ ಶೃಂಗಸಭೆ ನಡೆಯಲಿದೆ.
ಸಭೆಯಲ್ಲಿ ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸನಾರೊ, ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್, ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಮತ್ತು ದಕ್ಷಿಣ ಆಫ್ರಿಕಾದ ಅಧ್ಯಕ್ಷ ಸಿರಿಲ್ ರಾಮಫೋಸಾ ಭಾಗವಹಿಸಲಿದ್ದಾರೆ.
ಶೃಂಗಸಭೆಯಲ್ಲಿ ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ನ್ಯೂ ಡೆವಲಪ್ಮೆಂಟ್ ಬ್ಯಾಂಕ್ ಅಧ್ಯಕ್ಷ ಮಾರ್ಕೋಸ್ ಟ್ರಾಯ್ಜೊ, ಬ್ರಿಕ್ಸ್ ಬಿಸಿನೆಸ್ ಕೌನ್ಸಿಲ್ಪ ತಾತ್ಕಾಲಿಕ ಅಧ್ಯಕ್ಷ ಓಂಕಾರ್ ಕನ್ವಾರ್ ಮತ್ತು ಬ್ರಿಕ್ಸ್ ಮಹಿಳಾ ವ್ಯಾಪಾರ ಒಕ್ಕೂಟದ ತಾತ್ಕಾಲಿಕ ಅಧ್ಯಕ್ಷೆ ಡಾ.ಸಂಗೀತಾ ರೆಡ್ಡಿ ಅವರು ವರದಿಗಳನ್ನು ಮಂಡಿಸಲಿದ್ದಾರೆ.
ಶೃಂಗಸಭೆಯ ಥೀಮ್ ‘ಬ್ರಿಕ್ಸ್@15: ನಿರಂತರತೆ, ಬಲವರ್ಧನೆ ಮತ್ತು ಒಮ್ಮತಕ್ಕಾಗಿ ಬ್ರಿಕ್ಸ್ನೊಳಗಿನ ಸಹಕಾರ’ ಎಂಬುದಾಗಿದೆ. ಭಾರತವು ತನ್ನ ಅಧ್ಯಕ್ಷತೆಗಾಗಿ ನಾಲ್ಕು ಆದ್ಯತೆಯ ಕ್ಷೇತ್ರಗಳನ್ನು ರೂಪಿಸಿದೆ. ಅವುಗಳೆಂದರೆ ಬಹುಪಕ್ಷೀಯ ವ್ಯವಸ್ಥೆಯ ಸುಧಾರಣೆ, ಭಯೋತ್ಪಾದನೆ ನಿಗ್ರಹ, ಸುಸ್ಥಿರ ಅಭಿವೃದ್ಧಿ ಗುರಿಗಳನ್ನು ಸಾಧಿಸಲು ಡಿಜಿಟಲ್ ಮತ್ತು ತಾಂತ್ರಿಕ ಸಾಧನಗಳನ್ನು ಬಳಸುವುದು ಮತ್ತು ಜನರಿಗೆ ವಿನಿಮಯವನ್ನು ಹೆಚ್ಚಿಸುವುದು. ಇದರ ಜೊತೆಗೆ, ನಾಯಕರು ಕೋವಿಡ್-19 ಸಾಂಕ್ರಾಮಿಕದ ಪರಿಣಾಮ ಮತ್ತು ಇತರ ಪ್ರಸ್ತುತ ಜಾಗತಿಕ ಮತ್ತು ಪ್ರಾದೇಶಿಕ ಸಮಸ್ಯೆಗಳ ಬಗ್ಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಬ್ರಿಕ್ಸ್ ಶೃಂಗಸಭೆಯ ಅಧ್ಯಕ್ಷರಾಗುತ್ತಿರೀವುದು ಇದು ಎರಡನೇ ಬಾರಿ.
ಈ ಹಿಂದೆ ಅವರು 2016 ರಲ್ಲಿ ಗೋವಾ ಶೃಂಗಸಭೆಯ ಅಧ್ಯಕ್ಷತೆ ವಹಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.