ನವದೆಹಲಿ: ಭಾರತದ ಕೋವಿಡ್-19 ಲಸಿಕಾ ಅಭಿಯಾನ ಮಹತ್ವದ ಸಾಧನೆ ಮಾಡಿದೆ. 1.13 ಕೋಟಿಗೂ ಅಧಿಕ ಕೋವಿಡ್-19 ಲಸಿಕೆ ಡೋಸ್ಗಳನ್ನು ನಿನ್ನೆ ಒಂದೇ ದಿನ ನೀಡಲಾಗಿದೆ.
ಕಳೆದ 11 ದಿನಗಳಲ್ಲಿ ಮೂರು ಬಾರಿ ಈ ಮಹತ್ವದ ಸಾಧನೆಯನ್ನು ಮಾಡಲಾಗಿದೆ. ಕಳೆದ 24 ಗಂಟೆಗಳಲ್ಲಿ 1,13,53,571 ಲಸಿಕೆ ಡೋಸ್ಗಳನ್ನು ನೀಡುವುದರೊಂದಿಗೆ ದೇಶದ ಕೋವಿಡ್-19 ಲಸಿಕೆ ವ್ಯಾಪ್ತಿಯ ಒಟ್ಟು ಸಂಖ್ಯೆ 69,90,62,776 ಮೀರಿಸಿದೆ. 72,26,439 ಲಸಿಕೆ ಕಾರ್ಯಕ್ರಮಗಳನ್ನು ಇದುವರೆಗೆ ನಡೆಸಲಾಗಿದೆ.
ಕೇಂದ್ರ ಸರ್ಕಾರವು ಲಸಿಕೆ ವೇಗವನ್ನು ಹೆಚ್ಚಿಸಲು ಮತ್ತು ದೇಶಾದ್ಯಂತ ಕೋವಿಡ್ -19 ಲಸಿಕೆಯ ವ್ಯಾಪ್ತಿಯನ್ನು ವಿಸ್ತರಿಸಲು ಬದ್ಧವಾಗಿ ಕಾರ್ಯನಿರ್ವಹಿಸುತ್ತಿದೆ.
ಕಳೆದ 24 ಗಂಟೆಗಳಲ್ಲಿ 42,942 ರೋಗಿಗಳು ಕೋವಿಡ್ನಿಂದ ಚೇತರಿಸಿಕೊಂಡಿದ್ದಾರೆ. ಭಾರತದ ಚೇತರಿಕೆಯ ದರವು 97.48%ರಷ್ಟಿದೆ.
ಸಕ್ರಿಯ ಪ್ರಕರಣ ಪ್ರಸ್ತುತ 3,92,864 ಆಗಿದೆ. ಸಕ್ರಿಯ ಪ್ರಕರಣಗಳು ಪ್ರಸ್ತುತ ದೇಶದ ಒಟ್ಟು ಪಾಸಿಟಿವ್ ಪ್ರಕರಣಗಳ 1.19% ರಷ್ಟಿದೆ.
ದೇಶಾದ್ಯಂತ ಪರೀಕ್ಷಾ ಸಾಮರ್ಥ್ಯವನ್ನು ವಿಸ್ತರಿಸಲಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ ಒಟ್ಟು 15,26,056 ಪರೀಕ್ಷೆಗಳನ್ನು ನಡೆಸಲಾಯಿತು. ಭಾರತವು ಇದುವರೆಗೆ 53,31,89,348 ಪರೀಕ್ಷೆಗಳನ್ನು ನಡೆಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.