
ಬೆಂಗಳೂರು: ಶಿಕ್ಷಣದ ಮೂಲಕ ಮಾತ್ರ ಸಮಾಜದ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಾಧ್ಯ ಎಂದು ಸಚಿವ ಡಾ. ಅಶ್ವತ್ಥ್ ನಾರಾಯಣ್ ತಿಳಿಸಿದ್ದಾರೆ.
ರಾಜ್ಯದ ಎಲ್ಲ 430 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಕುರಿತು ಇಂದು ನಡೆದ ಒಂದು ದಿನದ ಕಾರ್ಯಾಗಾರದ ಸಲುವಾಗಿ, ಮೈಸೂರಿನ ವಿದ್ಯಾವರ್ಧಕ ಸಂಘ, ಗೋಕುಲಂ ಸಂಸ್ಥೆಗಳಿಗೆ ಅವರು ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಮೈಸೂರಿನ ಮಹಾರಾಣಿ ಕಾಲೇಜಿನ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಶಿಕ್ಷಣ ನಮ್ಮ ಬದುಕಿಗೆ ರಾಜಮಾರ್ಗ. ಶಿಕ್ಷಣದ ಮೂಲಕವೇ ಸಮಾಜಿಕ, ಆರ್ಥಿಕ ಬೆಳವಣಿಗೆ ಸಾಧ್ಯ. ಮನುಷ್ಯನ ಹುಟ್ಟಿನಿಂದಲೂ ಶಿಕ್ಷಣ ಜೊತೆಗೇ ಇದೆ. ಇದೀಗ ಶಿಕ್ಷಣ ನೀತಿಗಳನ್ನು ತಿದ್ದುಪಡಿ ಮಾಡಿ, ಅದರ ಗುಣಮಟ್ಟ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.
ವಿದ್ಯಾವರ್ಧಕ ಸಂಘ, ಮೈಸೂರು ಗೋಕುಲಂ ಸಂಸ್ಥೆಗಳಿಗೆ ಭೇಟಿ ನೀಡಿ #NEPKarnataka ಅನುಷ್ಠಾನ, ಶೈಕ್ಷಣಿಕ ಪ್ರಗತಿ ಬಗ್ಗೆ ಸಂವಾದ ನಡೆಸಿದೆ.
ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ #NEP2020 ಬಗ್ಗೆ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದ್ದು, ಯಾವುದೇ ಗೊಂದಲ, ಪ್ರಶ್ನೆಗಳ ಬಗ್ಗೆ ಕಾಲೇಜುಗಳಲ್ಲಿ ಕೇಳಬಹುದು.@BSBommai @BJP4Karnataka pic.twitter.com/8obBW54OFY
— Dr. C.N. Ashwath Narayan (@drashwathcn) September 7, 2021
ಮುಂದುವರಿದ ರಾಷ್ಟ್ರಗಳ ಜೊತೆ ಭಾರತ ಪೈಪೋಟಿ ನೀಡಲು ಶಿಕ್ಷಣದ ಗುಣಮಟ್ಟ ಹೆಚ್ಚಬೇಕಾಗಿದೆ. ಆದ್ದರಿಂದ ಶಿಕ್ಷಣ ವ್ಯವಸ್ಥೆಯಲ್ಲಿ ಬದಲಾವಣೆ ತರಲಾಗಿದೆ. ಸ್ಪರ್ಧಾತ್ಮಕ ಯುಗದಲ್ಲಿ ವಿಶ್ವಮಟ್ಟದಲ್ಲಿ ನಾವು ಓಟ ನಡೆಸಬೇಕು ಎಂದು ಅವರು ಹೇಳಿದ್ದಾರೆ. ಈ ನಿಟ್ಟಿನಲ್ಲಿ ಸರ್ಕಾರ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಅವರು ತಿಳಿಸಿದ್ದಾರೆ.
ರಾಜ್ಯದ ಎಲ್ಲ 430 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ (NEP 2020) ಕುರಿತು ಒಂದು ದಿನದ ಕಾರ್ಯಾಗಾರವನ್ನು ಸಪ್ಟೆಂಬರ್ 7ರಂದು ನಡೆಸಲಾಗುವುದು.
NEP ಬಗ್ಗೆ ಯಾರಿಗೇ ಪ್ರಶ್ನೆ, ಅನುಮಾನಗಳು ಇದ್ದರೂ ಸಮೀಪದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯಾಗಾರದಲ್ಲಿ ಭಾಗವಹಿಸಬಹುದು.#NEP2020 #NEPKarnataka pic.twitter.com/GtzxkHtFPE
— Dr. C.N. Ashwath Narayan (@drashwathcn) September 7, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.



