ಬೆಂಗಳೂರು: ಗ್ರಾಮೀಣ ಭಾಗಗಳಿಗೆ ಇಂಟರ್ನೆಟ್ ಸೌಲಭ್ಯ ಕಲ್ಪಿಸುವ ದೇಶದ ಮಹತ್ವದ ಭಾರತ್ ನೆಟ್ ಯೋಜನೆಯಲ್ಲಿ ಕರ್ನಾಟಕವನ್ನು ಸೇರ್ಪಡೆ ಮಾಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದರು.
ಅವರು ನವದೆಹಲಿಯಲ್ಲಿ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿ ಈ ಬಗ್ಗೆ ಮನವಿ ಮಾಡಿದ್ದಾರೆ.
ರಾಜ್ಯದಲ್ಲಿ ಆಪ್ಟಿಕಲ್ ಫೈಬರ್ ನೆಟ್ವರ್ಕಿಂಗ್ ಬಹಳ ಸೀಮಿತವಾಗಿದ್ದು, ಈ ನಿಟ್ಟಿನಲ್ಲಿ ಭಾರತ್ ನೆಟ್ಗೆ ಕರ್ನಾಟಕವನ್ನು ಸೇರ್ಪಡೆ ಮಾಡಬೇಕು. 4300 ಕೋಟಿ ರೂ. ಗಳಲ್ಲಿ ರಾಜ್ಯದ ಸಂಪೂರ್ಣ ನೆಟ್ವರ್ಕಿಂಗ್ ಸಾಧ್ಯವಿದೆ. ಇದರಿಂದ ರಾಜ್ಯದ ಪಂಚಾಯತ್ ಮಟ್ಟದಲ್ಲಿ ಆಡಳಿತ, ವ್ಯಾಪಾರ, ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ಅವರು ಕೇಂದ್ರ ಸಚಿವರಿಗೆ ತಿಳಿಸಿದ್ದು, ಇದಕ್ಕೆ ಅವರು ಸಕಾರಾತ್ಮಕ ಪ್ರತಿಕ್ರಿಯೆ ನೀಡಿದ್ದಾರೆ ಎಂದು ತಿಳಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.