ನವದೆಹಲಿ: ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಸಚಿವಾಲಯವು ಪ್ರಧಾನಿ ಮೋದಿ ಅವರ ನಿರ್ದೇಶನದಂತೆ ಕರ್ನಾಟಕದ ಜಿಲ್ಲೆಗಳಲ್ಲಿ ಇಂಟರ್ನೆಟ್ ಸಂಪರ್ಕವನ್ನು ಸುಧಾರಿಸುವ ನಿಟ್ಟಿನಲ್ಲಿ ಕಾರ್ಯಪಡೆ ರಚಿಸಿದೆ.
ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರು ಕರ್ನಾಟಕದಲ್ಲಿ ಜನಾಶೀರ್ವಾದ ಯಾತ್ರೆ ನಡೆಸಿದ ಸಂದರ್ಭದಲ್ಲಿ ಇಂಟರ್ನೆಟ್ ಸಮಸ್ಯೆ ಪರಿಹರಿಸುವಂತೆ ಹಲವು ವಿನಂತಿಗಳು ಸಾರ್ವಜನಿಕ ವಲಯದಿಂದ ಕೇಳಿ ಬಂದಿದ್ದವು. ಈ ಹಿನ್ನೆಲೆಯಲ್ಲಿ ರಾಜ್ಯದ ಪ್ರತಿ ಜಿಲ್ಲೆಯಲ್ಲಿಯೂ ಈ ಬಗ್ಗೆ ಅಧ್ಯಯನ ನಡೆಸಲು ಸಚಿವಾಲಯವು ತಜ್ಞರ ಟಾಸ್ಕ್ ಫೋರ್ಸ್ ಸಮಿತಿಯನ್ನು ಕಳುಹಿಸಿಕೊಡುವ ಭರವಸೆಯನ್ನು ಸಹ ನೀಡಿದ್ದರು.
ಈ ವಿಚಾರಕ್ಕೆ ಪೂರಕವಾಗಿ ನ್ಯಾಷನಲ್ ಇಂಟರ್ ಎಕ್ಸ್ಚೇಂಜ್ ಆಫ್ ಇಂಡಿಯಾ ಮತ್ತು ಸಾಫ್ಟವೇರ್ ಟೆಕ್ನಾಲಜಿ ಪಾರ್ಕ್ಸ್ ಆಫ್ ಇಂಡಿಯಾದ ಅಧಿಕಾರಿಗಳನ್ನು ಒಳಗೊಂಡ ಕಾರ್ಯಪಡೆ ತನಗೆ ಕೇಂದ್ರ ಸರ್ಕಾರ ವಹಿಸಿದ ಕಾರ್ಯವನ್ನು ಆರಂಭಿಸಿದೆ. ಕರ್ನಾಟಕದ ಹಲವು ಪ್ರದೇಶಗಳಿಗೆ ಭೇಟಿ ನೀಡಿ ಅವರು ಜನರಿಂದ ಮಾಹಿತಿ ಸಂಗ್ರಹಿಸಿ ಬಳಿಕ ಸಚಿವರಿಗೆ ವರದಿ ಸಲ್ಲಿಕೆ ಮಾಡಲಿದ್ದಾರೆ.
ಪ್ರಧಾನಿ ಮೋದಿ ಅವರ ಡಿಜಿಟಲ್ ಇಂಡಿಯಾ ಪರಿಕಲ್ಪನೆಯಂತೆ, ಎಲ್ಲಾಭಾರತೀಯರನ್ನು ಸಂಪರ್ಕಿಸುವುದು, ಈ ಯೋಜನೆಯ ಪ್ರಯೋಜನವನ್ನು ಪ್ರತಿಯೊಬ್ಬ ಭಾರತೀಯನೂ ಪಡೆಯುವಂತೆ ಮಾಡುವುದಾಗಿದ್ದು, ಈ ನಿಟ್ಟಿನಲ್ಲಿ ಕರ್ನಾಟಕ ರಾಜ್ಯದಲ್ಲಿಯೂ ಇಂಟರ್ನೆಟ್ ಸುಧಾರಣೆಗೆ ಈ ಉಪಕ್ರಮ ತೆಗೆದುಕೊಳ್ಳಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.