ಬೆಳ್ತಂಗಡಿ : ಸಹೋದರಿಯೊಂದಿಗೆ ಅನುಚಿತವಾಗಿ ವರ್ತಿಸಿದ ವಿಚಾರವನ್ನು ಪ್ರಶ್ನಿಸಿದ ಲಾಯಿಲದ ಸ್ನೇಕ್ ಅಶೋಕ್ ಮೇಲೆ ಆ. 22 ರಂದು ಆಸಿಡ್ ದಾಳಿ ನಡೆಸಿದ್ದ ಆರೋಪಿ ಇಂದಬೆಟ್ಟು ಗ್ರಾಮದ ಬೆದ್ರಬೆಟ್ಟು ಶಾಜು ಬೇಬಿ ಎಂಬವರನ್ನು ಸೋಮವಾರ ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.
ಈತ ಲಾಯಿಲ ಹಿಮರಡ್ಡ ಸಮೀಪದ ರಬ್ಬರ್ ತೋಟವೊಂದರಲ್ಲಿ ರಬ್ಬರ್ ಟ್ಯಾಪಿಂಗ್ ಕೆಲಸ ಮಾಡುತ್ತಿದ್ದು ಅಶೋಕನ ಸಹೋದರಿಯನ್ನು ಚುಡಾಯಿಸಿದ್ದಾರೆ ಎನ್ನಲಾಗಿದೆ.
ಈ ವಿಚಾರವನ್ನು ಯುವತಿ ಮನೆಯಲ್ಲಿ ತಿಳಿಸಿದ್ದು ಅಶೋಕ ಹಾಗೂ ಆತನ ಸಂಬಂಧಿ ಜೊತೆಯಾಗಿ ಆರೋಪಿಯಲ್ಲಿ ಪ್ರಶ್ನಿಸಿದ್ದಾರೆ. ಈ ಸಂದರ್ಭ ಆಸಿಡ್ ದಾಳಿ ನಡೆಸಿದ್ದಾರೆ. ಸೋಮವಾರ ಬೆಳಗ್ಗೆ ಆರೋಪಿ ಶಾಜುಬೇಬಿ ಪೊಲೀಸರು ಬಂಧಿಸಿದ್ದಾರೆ.
ದಾಳಿಗೊಳಗಾದ ಅಶೋಕ್ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶಾಜುಬೇಬಿಯನ್ನು ಸೋಮವಾರ ಸಂಜೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ಆರೋಪಿಗೆ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.