ಮೈಸೂರು: ಈ ಬಾರಿಯ ನಾಡಹಬ್ಬ ದಸರಾ ಮಹೋತ್ಸವ ಕೊರೋನಾ ನಡುವೆಯೇ ನಡೆಯಲಿದ್ದು, ಈ ಬಾರಿಯ ಕಾರ್ಯಕ್ರಮಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಈ ಬಗ್ಗೆ ಮಾತನಾಡಿರುವ ಮೈಸೂರು ಜಿಲ್ಲೆಯ ಉಸ್ತುವಾರಿ ಸಚಿವ ಎಸ್. ಟಿ. ಸೋಮಶೇಖರ್, ವಿಶ್ವವಿಖ್ಯಾತ ದಸರಾದಲ್ಲಿ ಈ ಬಾರಿ 8 ಆನೆಗಳು ಪಾಲ್ಗೊಳ್ಳಲಿವೆ. ಅಕ್ಟೋಬರ್ 15 ರಂದು ಜಂಬೂ ಸವಾರಿ ನಡೆಯಲಿದೆ ಎಂದು ತಿಳಿಸಿದ್ದಾರೆ.
ಹಾಗೆಯೇ ಈ ಬಾರಿ 9 ದಿನಗಳ ಕಾಲ ಅರಮನೆ ಮೈದಾನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿರುವುದಾಗಿಯೂ ಅವರು ತಿಳಿಸಿದ್ದಾರೆ. ಅಕ್ಟೋಬರ್ 7 ರಂದು ಚಾಮುಂಡೇಶ್ವರಿ ಬೆಟ್ಟದಲ್ಲಿ ದಸರಾ ಮಹೋತ್ಸವಕ್ಕೆ ಚಾಲನೆ ದೊರೆಯಲಿದ್ದು, ಅಕ್ಟೋಬರ್ 15 ರಂದು ಜಂಬೂಸವಾರಿ ನಡೆಯುತ್ತದೆ. ಈ ಬಾರಿ ತಾಯಿ ಚಾಮುಂಡೇಶ್ವರಿಯ ದರ್ಶನವನ್ನು ಸಾರ್ವಜನಿಕರಿಗೆ ಕಲ್ಪಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.