ಬೆಂಗಳೂರು: ರಾಜ್ಯದಲ್ಲಿ ತಳಮಟ್ಟದಿಂದಲೇ ಕ್ರೀಡಾಪಟುಗಳನ್ನು ತಯಾರು ಮಾಡಲು ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ.
ಈ ಹಿನ್ನೆಲೆಯಲ್ಲಿ 1666 ದೈಹಿಕ ಶಿಕ್ಷಣ ಶಿಕ್ಷಕರಿಗೆ ಗುಣಮಟ್ಟದ ವೈಜ್ಞಾನಿಕ ತರಬೇತಿ ನೀಡಲು ಕಾರ್ಯಯೋಜನೆಗಳನ್ನು ಸಹ ಸರ್ಕಾರ ರೂಪಿಸಿದೆ. ಅವರಿಗೆ ಶೀಘ್ರದಲ್ಲೇ ತರಬೇತಿ ನೀಡುವುದಕ್ಕೆ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಚಿವ ನಾರಾಯಣ್ ಗೌಡ ತಿಳಿಸಿದ್ದಾರೆ.
ರಾಜ್ಯದ ಕ್ರೀಡಾಪಟುಗಳಿಗೆ ಉತ್ತೇಜನ ನೀಡಲು ಸರ್ಕಾರ ಈಗಾಗಲೇ ಹಲವಾರು ಉಪಕ್ರಮಗಳನ್ನು ಕೈಗೊಂಡಿದೆ. ತಳಮಟ್ಟದಲ್ಲಿಯೇ ಕ್ರೀಡಾಪಟುಗಳನ್ನು ಗುರುತಿಸಿ ಅವರಿಗೆ ಉತ್ತಮ ತರಬೇತಿ ಒದಗಿಸಲು ದೈಹಿಕ ಶಿಕ್ಷಣ ಶಿಕ್ಷಕರಿಗೆ ವೈಜ್ಞಾನಿಕ ತರಬೇತಿ ನೀಡಲಾಗುತ್ತದೆ. ಈ ಹಿನ್ನೆಲೆಯಲ್ಲಿ ಗ್ರಾಮೀಣ ಭಾಗದ ಕ್ರೀಡಾಪಟುಗಳನ್ನು ಗುರುತಿಸುವ ಕಾರ್ಯ ನಡೆಯುತ್ತಿದೆ. ಅವರಿಗೆ ತರಬೇತಿ ನೀಡಲು ಅನುಕೂಲವಾಗುವಂತೆ ದೈಹಿಕ ಶಿಕ್ಷಣ ಶಿಕ್ಷಕರ ಪಟ್ಟಿ ಸಹ ತಯಾರಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.