ಬೆಂಗಳೂರು: ಶಿರಾಡಿ ಘಾಟ್ನಲ್ಲಿ ಚತುಷ್ಪಥ ರಸ್ತೆ ನಿರ್ಮಾಣ ಕಾರ್ಯವನ್ನು ತ್ವರಿತವಾಗಿ ಕೈಗೆತ್ತಿಕೊಳ್ಳುವಂತೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಮನವಿ ಮಾಡಿದ್ದಾರೆ.
ನವದೆಹಲಿಯಲ್ಲಿ ಗಡ್ಕರಿ ಅವರನ್ನು ಭೇಟಿ ಮಾಡಿರುವ ಸಿಎಂ ಈ ಮನವಿಯನ್ನು ಅವರ ಮುಂದಿರಿಸಿದ್ದಾರೆ. ಹಾಗೆಯೇ ಇದೇ ಸಂದರ್ಭದಲ್ಲಿ ಚತುಷ್ಪಥ ರಸ್ತೆ ನಿರ್ಮಾಣದ ಅಗತ್ಯ, ಸುರಂಗ ಮಾರ್ಗ ನಿರ್ಮಾಣದ ವಿಚಾರದಲ್ಲಿಯೂ ಸಮಾಲೋಚಕರ ಜೊತೆ ಮಾತನಾಡಿರುವುದಾಗಿ ತಿಳಿಸಿದ್ದಾರೆ.
ಜೊತೆಗೆ ರಾಜ್ಯ ಹೆದ್ದಾರಿಗಳನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಉನ್ನತೀಕರಣ ಮಾಡಲು ತಾತ್ವಿಕ ಅನುಮೋದನೆ ನೀಡಲಾಗಿದ್ದು, ನಾಲ್ಕು ಹೆದ್ದಾರಿಗಳ ಕುರಿತು ಸಮಗ್ರ ಯೋಜನಾ ವರದಿ ಸಿದ್ಧಪಡಿಸಿ, ಕೇಂದ್ರ ಸರ್ಕಾರಕ್ಕೆ ಸಲ್ಲಿಕೆ ಮಾಡಲಾಗಿದೆ. ಅವುಗಳನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಘೋಷಿಸುವಂತೆಯೂ ಅವರು ಮನವಿ ಸಲ್ಲಿಸಿದ್ದಾರೆ.
ರಾಜ್ಯದಲ್ಲಿ ಅತಿವೃಷ್ಟಿ, ಪ್ರವಾಹ, ಭೂ ಕುಸಿತಗಳಿಂದ ರಸ್ತೆಗಳು ಹಾನಿಯಾಗಿದ್ದು, ಅವುಗಳ ದುರಸ್ತಿಗೆ 184.85 ಕೋಟಿ ರೂ. ಬಿಡುಗಡೆಗೂ ಮನವಿ ಸಲ್ಲಿಸಿದ್ದಾರೆ. ರಾಜ್ಯದಲ್ಲಿ 400 ಎಕರೆ ಪ್ರದೇಶದಲ್ಲಿ ಎಲೆಕ್ಟ್ರಾನಿಕ್ ಪಾರ್ಕ್ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ. ಆಪ್ಟಿಕಲ್ ಫೈಬರ್ ಗ್ರಾಮೀಣ ಭಾಗಕ್ಕೂ ವಿಸ್ತರಿಸಲು ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರಿಗೆ ಮನವಿ ಸಲ್ಲಿಸಲಾಗಿದೆ.
ಮುಖ್ಯಮಂತ್ರಿ @BSBommai ರವರು ಇಂದು ಕೇಂದ್ರ ಭೂಸಾರಿಗೆ ಮತ್ತು ರಾಷ್ಟ್ರೀಯ ಹೆದ್ದಾರಿ ಸಚಿವ @nitin_gadkari ರವರನ್ನು ಭೇಟಿಯಾಗಿ ರಾಜ್ಯದ ವಿವಿಧ ಹೆದ್ದಾರಿ ಯೋಜನೆಗಳ ಕುರಿತು ಚರ್ಚಿಸಿದರು.
ರಾಜ್ಯದ ಲೋಕೋಪಯೋಗಿ ಸಚಿವ @CCPatilBJP, ಕಂದಾಯ ಸಚಿವ @RAshokaBJP ಮತ್ತಿತರರು ಉಪಸ್ಥಿತರಿದ್ದರು.@MORTHIndia @OfficeOfNG pic.twitter.com/lJWWRXxZj8
— CM of Karnataka (@CMofKarnataka) September 8, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.