ನವದೆಹಲಿ: ಇತ್ತೀಚೆಗೆ ಜಪಾನ್ನ ಟೊಕಿಯೋದಲ್ಲಿ ನಡೆದ ಪ್ಯಾರಾಲಿಂಪಿಕ್ಸ್ನಲ್ಲಿ19 ಪದಕಗಳ ಹಿರಿಮೆಯನ್ನು ದೇಶಕ್ಕೆ ತಂದುಕೊಟ್ಟ ದಿವ್ಯಾಂಗ ಸಾಧಕ ಕ್ರೀಡಾಪಟುಗಳನ್ನು ಅಭಿನಂದಿಸಲು ಪ್ರಧಾನಿ ಮೋದಿ ಅವರಿಂದು ಉಪಹಾರ ಕೂಟವನ್ನು ತಮ್ಮ ನಿವಾಸದಲ್ಲಿ ಆಯೋಜಿಸಿದ್ದರು.
ದೇಶದ ಪ್ಯಾರಾ ಅಥ್ಲೀಟ್ಗಳು ದೇಶಕ್ಕೆ ವಿವಿಧ ಕ್ರೀಡೆಗಳಿಗೆ ಸಂಬಂಧಿಸಿದಂತೆ 5 ಚಿನ್ನ, 8 ಬೆಳ್ಳಿ, 6 ಕಂಚು ಗೆಲ್ಲುವ ಮೂಲಕ ಅಭೂತಪೂರ್ವ ಸಾಧನೆಯನ್ನು ಮೆರೆದಿದ್ದರು. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು ಸಾಧಕ ಕ್ರೀಡಾಪಟುಗಳಿಗೆ ಅಭಿನಂದನೆ ಸಲ್ಲಿಸಲು ಈ ಕಾರ್ಯಕ್ರಮ ಏರ್ಪಡಿಸಿದ್ದರು. ಈ ಸಂದರ್ಭದಲ್ಲಿ ತಮ್ಮ ಹಸ್ತಾಕ್ಷರವಿರುವ ಶಾಲುಗಳನ್ನು ಉಡುಗೊರೆ ನೀಡುವ ಮೂಲಕ ಅವರಿಗೆ ಸನ್ಮಾನಿಸಿದರು.
ಈ ಬಾರಿಯ ಪ್ಯಾರಾಲಿಂಪಿಕ್ಸ್ನಲ್ಲಿ ಭಾರತ ಐತಿಹಾಸಿಕ ಸಾಧನೆ ಮೆರೆದಿದ್ದು, ಒಟ್ಟಾರೆ ಪದಕ ಪಡೆದ ದೇಶಗಳ ಪೈಕಿ 24 ನೇಯ ಸ್ಥಾನವನ್ನು ಅಲಂಕರಿಸಿದೆ. ಅವನಿ ಲೇಖರ ಅವರು ಒಂದೇ ಪ್ಯಾರಾಲಿಂಪಿಕ್ಸ್ನಲ್ಲಿ ಎರಡು ಪದಕಗಳನ್ನು ಗೆಲ್ಲುವ ಮೂಲಕ ವಿಶೇಷ ಸಾಧನೆ ಮೆರೆದಿದ್ದಾರೆ.a
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.