ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಜಯನಗರದಲ್ಲಿ ನಿರ್ಮಾಣ ಮಾಡಿರುವ ಆಸ್ಪತ್ರೆ ಈಗ ಸುಸಜ್ಜಿತ ಕೊರೋನಾ ಆಸ್ಪತ್ರೆಯಾಗಿ ಮಾರ್ಪಾಡಾಗಿದೆ.
ಈ ಆಸ್ಪತ್ರೆಯನ್ನು ಸಂಸ್ಥೆ 99 ಲಕ್ಷ ರೂ. ವೆಚ್ಚದಲ್ಲಿ ನವೀಕರಣ ಮಾಡಿದ್ದು, ಸಂಭಾವ್ಯ ಕೊರೋನಾ ಮೂರನೇ ಅಲೆಯನ್ನು ಎದುರಿಸಲು ಎಲ್ಲಾ ರೀತಿಯ ಅನುಕೂಲಗಳನ್ನು ಕಲ್ಪಿಸಿದೆ. ನವೀಕೃತಗೊಂಡ ಈ ಆಸ್ಪತ್ರೆಯಲ್ಲಿ ಆಮ್ಲಜನಕ ಪೂರಣ ವ್ಯವಸ್ಥೆ ಇರುವ 50 ಹಾಸಿಗೆಗಳ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.
ಈ ಆಸ್ಪತ್ರೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೆ. 12 ರಂದು ಲೋಕಾರ್ಪಣೆ ಮಾಡಲಿದ್ದಾರೆ.
ಈ ಆಸ್ಪತ್ರೆಯಲ್ಲಿ ಆಮ್ಲಜನಕ ಪೂರೈಕೆಗೆ ಹೈ-ನೇಸಲ್ ಫ್ಲೋ ವ್ಯವಸ್ಥೆ ಸಹ ಇದೆ. ಆಮ್ಲಜನಕ ಘಟಕವನ್ನು ಸಹ ಈ ಆಸ್ಪತ್ರೆ ಒಳಗೊಂಡಿದೆ. ಸೋಂಕಿತರಿಗೆ ಚಿಕಿತ್ಸೆ ನೀಡಲು ಎಲ್ಲಾ ರೀತಿಯ ಯಂತ್ರೋಪಕರಣಗಳು, ಇನ್ನಿತರ ವ್ಯವಸ್ಥೆಯನ್ನು ಈ ಆಸ್ಪತ್ರೆ ಒಳಗೊಂಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.