ಲಕ್ನೋ :2022 ರಲ್ಲಿ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಬಿಜೆಪಿಯು ಆ ರಾಜ್ಯದಲ್ಲಿ 1.5 ಕೋಟಿ ಹೊಸ ಸದಸ್ಯರನ್ನು ನೋಂದಾಯಿಸುವ ಯೋಜನೆಯನ್ನು ಹಾಕಿಕೊಂಡಿದೆ. ರಾಜಕೀಯವಾಗಿ ಉತ್ತರ ಪ್ರದೇಶ ಅತ್ಯಂತ ಮಹತ್ವದ ರಾಜ್ಯವಾಗಿದೆ.
ಪ್ರಸ್ತುತ ಬಿಜೆಪಿ ಪಕ್ಷವು ಉತ್ತರಪ್ರದೇಶದಲ್ಲಿ ಸುಮಾರು 2.5 ಕೋಟಿ ಸದಸ್ಯರನ್ನು ಹೊಂದಿದೆ. 403 ಸದಸ್ಯ ಬಲದ ಉತ್ತರಪ್ರದೇಶ ವಿಧಾನಸಭೆಯು ಮುಂದಿನ ವರ್ಷದ ಫೆಬ್ರವರಿ-ಮಾರ್ಚ್ ತಿಂಗಳಲ್ಲಿ ಚುನಾವಣೆಯನ್ನು ಎದುರಿಸುವ ಸಾಧ್ಯತೆಯಿದೆ.
‘ಬೂತ್ ಜೀತೋ, ಚುನಾವ್ ಜೀತೋ’ ಅಭಿಯಾನದ ಭಾಗವಾಗಿ ಬಿಜೆಪಿಯು ಮುಂದಿನ ಚುನಾವಣೆಗೆ ಮುಂಚಿತವಾಗಿ ಹೊಸ ಸದಸ್ಯರನ್ನು ನೋಂದಾಯಿಸಿಕೊಳ್ಳಲು ಸದಸ್ಯತ್ವ ಅಭಿಯಾನವನ್ನು ನಡೆಸಲಿದೆ ಎಂದು ಉತ್ತರಪ್ರದೇಶದ ಬಿಜೆಪಿ ಉಪಾಧ್ಯಕ್ಷ ವಿಜಯ್ ಬಹುದ್ದೂರ್ ಪಾಠಕ್ ಹೇಳಿದ್ದಾರೆ.
“ಬಿಜೆಪಿಯ ಯೋಜನೆಯಂತೆ ಸುಮಾರು 1.5 ಲಕ್ಷ ಚುನಾವಣಾ ಬೂತ್ಗಳಲ್ಲಿ ಬಿಜೆಪಿ ಕಾರ್ಯಕರ್ತರು ಕನಿಷ್ಠ ತಲಾ ನೂರು ಸದಸ್ಯರನ್ನು ನೋಂದಾಯಿಸಬೇಕು. ಅಭಿಯಾನದಡಿ ಬಿಜೆಪಿಯು 1.5 ಕೋಟಿ ಸದಸ್ಯರನ್ನು ನೋಂದಾಯಿಸುವ ಗುರಿಯನ್ನು ಹೊಂದಿದೆ” ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.