ಬೆಂಗಳೂರು: ಕೊರೋನಾ ಕಾರಣದಿಂದ ರಾಜ್ಯದಲ್ಲಿ ಈ ಬಾರಿಯೂ ವಿದ್ಯಾರ್ಥಿಗಳಿಗೆ ಪಠ್ಯ ಕಡಿತಗೊಳಿಸಿದರೆ, ಮುಂದಿನ ತರಗತಿಗಳಿಗೆ ತೊಂದರೆಯಾಗಲಿದೆ. ಹೀಗಾಗಿ ಪಠ್ಯ ಕಡಿತಕ್ಕೆ ಸಂಬಂಧಿಸಿದಂತೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸಚಿವ ಬಿ. ಸಿ. ನಾಗೇಶ್ ತಿಳಿಸಿದ್ದಾರೆ.
ವಿದ್ಯಾರ್ಥಿಗಳಿಗೆ ಬ್ರಿಡ್ಜ್ ಕೋರ್ಸ್ಗಳ ಮೂಲಕ ಸಿಲಬಸ್ ಪೂರ್ಣಗೊಳಿಸಲಾಗುತ್ತಿದೆ. ಕಳೆದ ಒಂದೂವರೆ ವರ್ಷದಿಂದ. ಮಕ್ಕಳು ಶಾಲೆಯಿಂದ ದೂರ ಉಳಿದಿದ್ದಾರೆ. ಇದೀಗ ಮಕ್ಕಳು ಶಾಲೆಗಳಿಗೆ ಬರುತ್ತಿದ್ದು, ಪಠ್ಯ ಕಡಿತ ಮಾಡದೆಯೇ, ಬ್ರಿಡ್ಜ್ ಕೋರ್ಸ್ ಮೂಲಕ ಪಠ್ಯಗಳನ್ನು ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.
ಹಾಗೆಯೇ ಶಿಕ್ಷಕರ ರಜೆಗಳನ್ನು ಕಡಿಮೆ ಮಾಡಿ, ಸಿಲಬಸ್ ಪೂರ್ಣಗೊಳಿಸುವಂತೆ ಸೂಚಿಸಲು ಚಿಂತನೆ ನಡೆದಿದೆ. ಈ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ. ಮುಂದಿನ ದಿನಗಳಲ್ಲಿ ಶಿಕ್ಷಕರ ಸಹಕಾರವನ್ನು ಅವಲಂಬಿಸಿ, ಅಗತ್ಯ ಬಿದ್ದರೆ ಇಂತಹ ನಿರ್ಣಯ ಕೈಗೊಳ್ಳುವುದಾಗಿ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.