ಬೆಂಗಳೂರು: ರಾಜ್ಯ ಸರ್ಕಾರದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ವಿಧಾನ ಪರಿಷತ್ನ ಸಭಾ ನಾಯಕರಾಗಿ ನಿಯುಕ್ತರಾಗಿದ್ದಾರೆ.
ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಈ ಸ್ಥಾನದಲ್ಲಿ ಕಾರ್ಯ ನಿರ್ವಹಣೆ ಮಾಡಲು ಸಿಎಂ ಬಸವರಾಜ ಬೊಮ್ಮಾಯಿ ಅವರು ನಾಮನಿರ್ದೇಶನ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕೋಟ ಶ್ರೀನಿವಾಸ ಪೂಜಾರಿ ಅವರು ಈ ಹಿಂದೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸಂಪುಟದಲ್ಲಿ ಮುಜರಾಯಿ ಇಲಾಖೆಯ ಸಚಿವರಾಗಿಯೂ ಕೆಲಸ ನಿರ್ವಹಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.