ಬೆಂಗಳೂರು: ಅಸಂಘಟಿತ ಕಾರ್ಮಿಕರಿಗೆ ಸಂಬಂಧಿಸಿದಂತೆ ಕಾರ್ಯಾರಂಭ ಮಾಡಲಾಗಿರುವ ಇ – ಶ್ರಮ್ ಪೋರ್ಟಲ್ಗೆ ಕ್ಷಿಪ್ರ ಚಾಲನೆ ನೀಡಿ, ಅದನ್ನು ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿರುವ ರಾಜ್ಯಗಳ ಸಾಲಿನಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದೆ ಎಂದು ಸಚಿವ ಶಿವರಾಮ್ ಹೆಬ್ಬಾರ್ ತಿಳಿಸಿದ್ದಾರೆ.
ಈ ವಲಯಕ್ಕೆ ಸಂಬಂಧಿಸಿದಂತೆ ರಾಜ್ಯದ ಸುಮಾರು 1.60 ಕೋಟಿಗಳಷ್ಟು ಅಸಂಘಟಿತ ಕಾರ್ಮಿಕರಿದ್ದು, ಉಚಿತ ಶಿಕ್ಷಣ, 2 ಲಕ್ಷ ರೂ. ಗಳ ವರೆಗೆ ಅಪಘಾತ ವಿಮೆ ಸೇರಿದಂತೆ ಇನ್ನೂ ಹಲವಾರು ಸವಲತ್ತುಗಳನ್ನು ಇದರ ಮೂಲಕ ನೀಡಲಾಗುತ್ತದೆ. ಈ ಇ-ಪೋರ್ಟಲ್ನಿಂದ ಕ್ರಾಂತಿಕಾರಿ ಬದಲಾವಣೆ ಸಾಧ್ಯವಾಗಲಿದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ದೇಶದ 65 ಕೋಟಿಗಿಂತ ಅಧಿಕ ಜನರು ಈ ವಲಯದಲ್ಲಿ ಸೇರ್ಪಡೆಯಾಗಲಿದ್ದಾರೆ. ಈ ಪೋರ್ಟಲ್ ಬಳಕೆ ಸರಳವಾಗಿದ್ದು, ನೋಂದಣಿಗಾಗಿ ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ಬುಕ್ ನೀಡದರೆ ಸಾಕಾಗುತ್ತದೆ ಎಂದು ಅವರು ಹೇಳಿದ್ದಾರೆ. ಇದು ಕಾರ್ಮಿಕ ಇಲಾಖೆಯ ಸಂಘಟನಾತ್ಮಕ ಕಾರ್ಯವಾಗಿದ್ದು, ಇದರ ಉಪಯೋಗವನ್ನು ಅಸಂಘಟಿತ ಕಾರ್ಮಿಕ ವಲಯ ಪಡೆದುಕೊಳ್ಳುವಂತೆ ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.