ಬೆಂಗಳೂರು: ಅಕಸ್ಮಾತ್ ಆಗಿ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರು ಮುಂದಿನ ಚುನಾವಣೆಯಲ್ಲಿ ಗೆದ್ದರೂ, ಅವರನ್ನು ವಿರೋಧ ಪಕ್ಷದಲ್ಲೇ ಕೂರುವಂತೆ.ಮಾಡುತ್ತೇನೆ ಎಂದು ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪ ಅವರು ತಿಳಿಸಿದ್ದಾರೆ.
ವಿಧಾನ ಮಂಡಲ ಅಧಿವೇಶನದ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಿ ಬಳಿಕ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಮುಂದಿನ ಚುನಾವಣೆಯಲ್ಲಿ ಗೆದ್ದರೂ, ಅವರು ವಿಪಕ್ಷದಲ್ಲಿಯೇ ಕೂರುವಂತೆ ಮಾಡುವುದಾಗಿ ಹೇಳಿದ್ದಾರೆ.
ಹಾಗೆಯೇ ಸಿಎಂ ಬೊಮ್ಮಾಯಿ ಬಗೆಗೂ ಮಾತನಾಡಿದ ಅವರು, ಬಸವರಾಜ ಬೊಮ್ಮಾಯಿ ಅವರು ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರಿಗೆ ಎಲ್ಲಾ ರೀತಿಯ ಸಹಕಾರ ನೀಡಲಾಗುತ್ತದೆ. ಮುಂದಿನ ಬಾರಿಯೂ ಬಿಜೆಪಿ ಅಧಿಕಾರಕ್ಕೆ ಬರಲು ಪೂರಕವಾದ ಎಲ್ಲಾ ಕಾರ್ಯಗಳನ್ನು ನಿರ್ವಹಿಸಲಾಗುತ್ತಿದೆ. ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಬಿಜೆಪಿಯನ್ನು ಅಧಿಕಾರಕ್ಕೆ ತರುವ ಕೆಲಸ ಮಾಡಲಾಗುತ್ತದೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.