ನವದೆಹಲಿ: ಪ್ರಧಾನಿ ಮೋದಿ ಅವರು ಗುಜರಾತ್ನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಭೂಪೇಂದ್ರ ಪಟೇಲ್ ಅವರನ್ನು ಅಭಿನಂದಿಸಿದ್ದಾರೆ.
ನಿರ್ಗಮಿತ ಮುಖ್ಯಮಂತ್ರಿ ವಿಜಯ್ ರೂಪಾನಿ ಅವರನ್ನೂ ಶ್ಲಾಘಿಸಿರುವ ಪ್ರಧಾನಿ ಸಿಎಂ ಆಗಿದ್ದ ಐದು ವರ್ಷಗಳ ಅವಧಿಯಲ್ಲಿ ರೂಪಾನಿ ಅನೇಕ ಜನಸ್ನೇಹಿ ಕ್ರಮಗಳನ್ನು ಕೈಗೊಂಡಿದ್ದರು. ಸಮಾಜದ ಎಲ್ಲ ವರ್ಗಕ್ಕೂ ಅವಿರತವಾಗಿ ಶ್ರಮಿಸಿದ್ದರು ಎಂದು ಹೇಳಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಪ್ರಧಾನಿ, “ಗುಜರಾತ್ನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಭೂಪೇಂದ್ರ ಭಾಯ್ ಅವರಿಗೆ ಅಭಿನಂದನೆಗಳು. ನಾನು ಅವರನ್ನು ಹಲವು ವರ್ಷಗಳಿಂದ ಬಲ್ಲೆ. ಅದು ಬಿಜೆಪಿ ಸಂಘಟನೆಯಲ್ಲಿರಲಿ ಅಥವಾ ನಾಗರಿಕ ಆಡಳಿತದಲ್ಲಿರಲಿ ಅಥವಾ ಸಮುದಾಯ ಸೇವೆಯಲ್ಲಿರಲಿ ಅವರ ಅನುಕರಣೀಯ ಕೆಲಸವನ್ನು ನೋಡಿದ್ದೇನೆ. ಅವರು ಖಂಡಿತವಾಗಿಯೂ ಗುಜರಾತ್ನ ಬೆಳವಣಿಗೆಯ ಪಥವನ್ನು ಶ್ರೀಮಂತಗೊಳಿಸುತ್ತಾರೆ.
Congratulations to Bhupendra Bhai on taking oath as CM of Gujarat. I have known him for years and have seen his exemplary work, be it in the BJP Organisation or in civic administration and community service. He will certainly enrich Gujarat’s growth trajectory. @Bhupendrapbjp
— Narendra Modi (@narendramodi) September 13, 2021
“ಸಿಎಂ ಆಗಿದ್ದ ಐದು ವರ್ಷಗಳ ಅವಧಿಯಲ್ಲಿ ವಿಜಯ್ ರೂಪಾನಿ ಜೀ ಅವರು ಅನೇಕ ಜನಸ್ನೇಹಿ ಕ್ರಮಗಳನ್ನು ಕೈಗೊಂಡಿದ್ದಾರೆ. ಸಮಾಜದ ಎಲ್ಲ ವರ್ಗಕ್ಕೂ ಅವಿರತವಾಗಿ ಶ್ರಮಿಸಿದ್ದಾರೆ. ಮುಂದಿನ ದಿನಗಳಲ್ಲಿ ಅವರು ಸಾರ್ವಜನಿಕ ಸೇವೆಗೆ ಕೊಡುಗೆ ನೀಡುವುದನ್ನು ಮುಂದುವರಿಸುತ್ತಾರೆ ಎಂದು ನನಗೆ ವಿಶ್ವಾಸವಿದೆ,” ಎಂದಿದ್ದಾರೆ.
During his five years as CM, Vijay Rupani Ji has undertaken many people-friendly measures. He worked tirelessly for all sections of society. I am certain he will continue to contribute to public service in the times to come. @vijayrupanibjp
— Narendra Modi (@narendramodi) September 13, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.