ನವದೆಹಲಿ: ಹಿಂದಿ ದಿನದ ಪ್ರಯುಕ್ತ ಸಮಸ್ತ ದೇಶವಾಸಿಗಳಿಗೆ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಇನ್ನಿತರ ಗಣ್ಯರು ಶುಭಹಾರೈಸಿದ್ದಾರೆ.
ಪ್ರಧಾನಿ ಮೋದಿ ಅವರು ಈ ಸಂಬಂಧ ಟ್ವೀಟ್ ಮಾಡಿದ್ದು, ನಿಮ್ಮೆಲ್ಲರಿಗೂ ಹಿಂದಿ ದಿನದ ಶುಭಾಶಯಗಳು. ಹಿಂದಿಯನ್ನು ಸಮರ್ಥ ಭಾಷೆಯನ್ನಾಗಿಸುವ ನಿಟ್ಟಿನಲ್ಲಿ ವಿವಿಧ ಪ್ರದೇಶಗಳ ಜನರು ಗಮನಾರ್ಹ ಪಾತ್ರ ವಹಿಸಿದ್ದಾರೆ. ಹಿಂದಿ ಭಾಷೆಯು ಜಾಗತಿಕ ಮಟ್ಟದಲ್ಲಿ ಬಲವಾದ ಗುರುತು ಮೂಡಿಸುತ್ತಿರುವುದು ಎಲ್ಲರ ಪ್ರಯತ್ನಗಳ ಫಲಿತಾಂಶವಾಗಿದೆ ಎಂದು ಹೇಳಿದ್ದಾರೆ.
आप सभी को हिन्दी दिवस की ढेरों बधाई। हिन्दी को एक सक्षम और समर्थ भाषा बनाने में अलग-अलग क्षेत्रों के लोगों ने उल्लेखनीय भूमिका निभाई है। यह आप सबके प्रयासों का ही परिणाम है कि वैश्विक मंच पर हिन्दी लगातार अपनी मजबूत पहचान बना रही है।
— Narendra Modi (@narendramodi) September 14, 2021
ಹಾಗೆಯೇ ಈ ದಿನದ ಪ್ರಯುಕ್ತ ಅಮಿತ್ ಶಾ ಅವರು ಟ್ವೀಟ್ ಮಾಡಿದ್ದು, ಭಾವನೆಗಳನ್ನು ವ್ಯಕ್ತಪಡಿಸಲು ಭಾಷೆ ಪ್ರಬಲ ಮಾಧ್ಯಮ. ನಮ್ಮ ಸಾಂಸ್ಕೃತಿಕ ಪ್ರಜ್ಞೆ, ರಾಷ್ಟ್ರೀಯ ಏಕತೆಯ ಮೂಲಾಧಾರವಾಗಿರುವ ಹಿಂದಿಯು ಪ್ರಾಚೀನ ನಾಗರೀಕತೆ ಮತ್ತು ಆಧುನಿಕ ಪ್ರಗತಿಯ ನಡುವಿನ ಸೇತುವೆಯಾಗಿದೆ. ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ನಾವು ಹಿಂದಿ ಮತ್ತು ಎಲ್ಲಾ ಭಾರತೀಯ ಭಾಷೆಗಳ ಸಮಾನಾಂತರ ಅಭಿವೃದ್ಧಿಗೆ ನಿರಂತರವಾಗಿ ಬದ್ಧರಾಗಿದ್ದೇವೆ ಎಂದು.ಹೇಳಿದ್ದಾರೆ. ಈ ಹಿಂದಿ ದಿನದ ಸಂದರ್ಭದಲ್ಲಿ ಎಲ್ಲಾ ದೇಶವಾಸಿಗಳು ತಮ್ಮ ಮಾತೃಭಾಷೆಯ ಜೊತೆಗೆ ಹಿಂದಿಯನ್ನು ಅಧಿಕೃತ ಭಾಷೆಯನ್ನಾಗಿ ಬಳಸುವ ಪ್ರತಿಜ್ಞೆಯನ್ನು ತೆಗೆದುಕೊಳ್ಳುವಂತೆ ಮನವಿ ಮಾಡಿದ್ದಾರೆ. ಮಾತೃಭಾಷೆ ಮತ್ತು ಅಧಿಕೃತ ಭಾಷೆಯ ಸಮನ್ವಯದಲ್ಲಿ ದೇಶದ ಪ್ರಗತಿ ಅಡಕವಾಗಿದೆ. ಎಲ್ಲರಿಗೂ ಹಿಂದಿ ದಿನದ ಶುಭಾಶಯಗಳು ಎಂದು ಹೇಳಿದ್ದಾರೆ.
हिंदी दिवस के अवसर पर मैं सभी देशवासियों से आग्रह करता हूँ कि मूल कार्यों में अपनी मातृभाषा के साथ राजभाषा हिंदी का उत्तरोत्तर प्रयोग करने का संकल्प लें।
मातृभाषा व राजभाषा के समन्वय में ही भारत की प्रगति समाहित है।
आप सभी को ‘हिंदी दिवस’ की हार्दिक शुभकामनाएं।
— Amit Shah (@AmitShah) September 14, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.