ನವದೆಹಲಿ: ಕೊರೋನಾ ನಿಯಂತ್ರಣ ಹಿನ್ನೆಲೆಯಲ್ಲಿ ಲಸಿಕೆಗಳನ್ನು ಅಂಡಮಾನ್ ಮತ್ತು ನಿಕೋಬಾರ್, ಮಣಿಪುರ, ನಾಗಾಲ್ಯಾಂಡ್ಗಳಿಗೆ ಒಯ್ಯಲು ಡ್ರೋಣ್ ಬಳಕೆಗೆ ಸಂಬಂಧಿಸಿದಂತೆ ಐಸಿಎಂಆರ್ಗೆ ಷರತ್ತುಬದ್ಧ ಅನುಮತಿ ನೀಡಲಾಗಿದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯವು ತಿಳಿಸಿದೆ.
ಸಚಿವಾಲಯವು ತನ್ನ ಹೇಳಿಕೆಯಲ್ಲಿ, ಲಸಿಕೆಗಳನ್ನು ನೀಡಲು ಮೂರು ಸಾವಿರ ಮೀಟರ್ಗಳಷ್ಟು ಎತ್ತರದ ವರೆಗೆ ಡ್ರೋನ್ ಬಳಕೆಗೆ ಐಸಿಎಂಆರ್ಗೆ ಅನುಮತಿ ನೀಡಲಾಗಿದೆ ಎಂದು ಹೇಳಿದೆ.
ಕಳೆದ ಎರಡು ದಿನಗಳ ಹಿಂದೆ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರು ಪ್ರಥಮ ಬಾರಿಗೆ ತೆಲಂಗಾಣದಲ್ಲಿ ಡ್ರೋಣ್ ಮೂಲಕ ಲಸಿಕೆಗಳು, ಔಷಧಗಳ ವಿತರಣೆ ಆರಂಭಿಸಿದ್ದರು. ಇದೀಗ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಗೆ ಡ್ರೋಣ್ ಬಳಕೆಗೆ ಷರತ್ತುಬದ್ಧ ಅನುಮತಿ ಒದಗಿಸಲಿದೆ.
ಹಾಗೆಯೇ ಮುಂಬೈನ ಐಐಟಿಗೆ ತನ್ನ ಸ್ವಂತ ಆವರಣದಲ್ಲಿ ಸಂಶೋಧನೆ, ಅಭಿವೃದ್ಧಿ, ಪರೀಕ್ಷಾ ಉದ್ದೇಶಗಳಿಗಾಗಿ ಡ್ರೋಣ್ ಬಳಕೆಗೆ ಷರತ್ತುಬದ್ಧ ಅನುಮತಿ ನೀಡಲಾಗಿರುವುದಾಗಿ ಸಚಿವಾಲಯವು ತನ್ನ ಹೇಳಿಕೆಯಲ್ಲಿ ಉಲ್ಲೇಖಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.