ಲಕ್ನೋ: ಅಲಿಘಡದ ರಾಜಾ ಮಹೇಂದ್ರ ಪ್ರತಾಪ್ ಸಿಂಗ್ ವಿಶ್ವವಿದ್ಯಾಲಯಕ್ಕೆ ಪ್ರಧಾನಿ ಮೋದಿ ಅವರು ಶಂಕುಸ್ಥಾಪನೆ ನೆರವೇರಿಸಿದ್ದಾರೆ.
ಈ ಸಂದರ್ಭದಲ್ಲಿ ಈ ವಿಶ್ವವಿದ್ಯಾಲಯದ ರೂಪುರೇಷೆಗಳ ಬಗ್ಗೆ ಪ್ರಧಾನಿ ಅವರಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಉಪಮುಖ್ಯಮಂತ್ರಿ ದಿನೇಶ್ ಶರ್ಮಾ ಅವರು ಮಾಹಿತಿ ನೀಡಿದ್ದಾರೆ. ಈ ವಿಶ್ವವಿದ್ಯಾಲಯವನ್ನು ಉತ್ತರ ಪ್ರದೇಶದಲ್ಲಿ ಸ್ವಾತಂತ್ರ್ಯ ಹೋರಾಟಗಾರ, ಶಿಕ್ಷಣ ತಜ್ಞ, ಸಮಾಜ ಸುಧಾರಕ ರಾಜ ಮಹೇಂದ್ರ ಪ್ರತಾಪ್ ಸಿಂಗ್ ಅವರ ಸ್ಮರಣಾರ್ಥ ನಿರ್ಮಾಣ ಮಾಡಲಾಗುತ್ತಿದೆ.
ಈ ವಿವಿಯನ್ನು ಅಲಿಘಡದ ಲೋಧಾ ಗ್ರಾಮದಲ್ಲಿ ಒಟ್ಟು 92 ಎಕರೆ ಪ್ರದೇಶದಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಈ ವಿವಿ ವ್ಯಾಪ್ತಿಗೆ ಒಟ್ಟು 395 ಕಾಲೇಜುಗಳು ಬರಲಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.