ಬೆಂಗಳೂರು: ರಾಜ್ಯದ ವಿವಿಧ ಭಾಗದ ಸುಮಾರು 803 ಜನವಸತಿಯನ್ನು ಕಂದಾಯ ಗ್ರಾಮಗಳೆಂದು ಘೋಷಿಸಿ ಆದೇಶ ಹೊರಡಿಸಲಾಗಿದೆ ಎಂದು ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.
ರಾಜ್ಯದ 1400 ಜನವಸತಿ ಪ್ರದೇಶಗಳನ್ನು ಕಂದಾಯ ಗ್ರಾಮಗಳೆಂದು ಘೋಷಣೆ ಮಾಡುವ ಪ್ರಕ್ರಿಯೆ ಪ್ರಾರಂಭವಾಗಿತ್ತು. ಇದರಲ್ಲಿ 803 ಈಗಾಗಲೇ ಸಂಪೂರ್ಣವಾಗಿದೆ. ಬಾಕಿ ಉಳಿದವುಗಳನ್ನು ಕಂದಾಯ ಗ್ರಾಮಗಳೆಂದು ಘೋಷಿಸುವ ಪ್ರಕ್ರಿಯೆಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.
ಜನವಸತಿ ಪ್ರದೇಶಗಳಿಗೆ ಕಂದಾಯ ಗ್ರಾಮಗಳೆಂಬ ಸ್ಥಾನಮಾನ ಇದ್ದಲ್ಲಿ ಮಾತ್ರ ಅಭಿವೃದ್ಧಿ ಕೆಲಸಗಳಿಗೆ ಅನುದಾನ, ಮೂಲ ಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚು ಪೂರಕವಾಗುತ್ತದೆ. ಈ ವಿಷಯವನ್ನು ರಾಜ್ಯ ಸರ್ಕಾರ ಆದ್ಯತೆ ಎಂದು ಪರಿಗಣಿಸಿ, ಅದಕ್ಕೆ ಪೂರಕವಾದ ಎಲ್ಲಾ ಕೆಲಸಗಳನ್ನು ನಿರ್ವಹಿಸುತ್ತಿದೆ ಎಂದು ಅಶೋಕ್ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.