ನವದೆಹಲಿ: ಪ್ರಧಾನಿ ಮೋದಿ ಅವರ ಸಂಪುಟದಲ್ಲಿ ದೂರಸಂಪರ್ಕ ಕ್ಷೇತ್ರದಲ್ಲಿ 100% ವಿದೇಶಿ ನೇರ ಬಂಡವಾಳಕ್ಕೆ ಸಮ್ಮತಿ, ದೇಶದ ಎಲ್ಲಾ ಜಿಲ್ಲೆಗಳಲ್ಲಿಯೂ ಸಂಯೋಜಿತ ಆರೋಗ್ಯ ಕೇಂದ್ರಗಳ ಸ್ಥಾಪನೆ, ಎಜಿಆರ್ ಬಾಕಿ ಪಾವತಿಗೆ ಟೆಲಿಕಾಂ ಕಂಪೆನಿಗಳಿಗೆ ನಾಲ್ಕು ವರ್ಷಗಳಿಗೆ ಅವಕಾಶ ಸೇರಿದಂತೆ ಇನ್ನೂ ಕೆಲವು ಮಹತ್ವದ ಸುಧಾರಣಾ ಕ್ರಮಗಳಿಗೆ ಅನುಮೋದನೆ ನೀಡಲಾಗಿದೆ.
ಕೊರೋನಾ ಕಾರಣದಿಂದ ಕಳೆಗುಂದಿರುವ ಕ್ಷೇತ್ರಗಳ ಪುನಶ್ಚೇತನಕ್ಕೆ ಸಂಬಂಧಿಸಿದಂತೆ ಈ ಮಹತ್ವದ ಯೋಜನೆಗಳಿಗೆ ಕೇಂದ್ರ ಸರ್ಕಾರ ಅಸ್ತು ಎಂದಿದೆ.
ದೇಶದಲ್ಲಿ ಆತ್ಮನಿರ್ಭರ ಸ್ವಸ್ಥ ಭಾರತ ಯೋಜನೆಯ ಅನುಷ್ಠಾನಕ್ಕೆ 64 ಸಾವಿರ ಕೋಟಿ ರೂ. ಗಳನ್ನು ಮೀಸಲಿಡಲಾಗಿದೆ. ದೇಶದ ಎಲ್ಲ ಜಿಲ್ಲೆಗಳು, ಹೋಬಳಿಗಳಿಗೆ ಸಂಬಂಧಿಸಿದಂತೆ ಸುಸಜ್ಜಿತ ಸಂಯೋಜಿತ ಆರೋಗ್ಯ ಕೇಂದ್ರಗಳ ಸ್ಥಾಪನೆಗೂ ಕೇಂದ್ರ ಸರ್ಕಾರ ನಿರ್ಣಯ ಕೈಗೊಂಡಿದೆ. ಎಲ್ಲಾ ರಾಜ್ಯಗಳಿಗೆ ಸಂಬಂಧಿಸಿದಂತೆ 11,024 ನಗರ ಆರೋಗ್ಯ ಕೇಂದ್ರಗಳ ಸ್ಥಾಪನೆ, 15 ಆರೋಗ್ಯ ತುರ್ತು ಶಸ್ತ್ರಚಿಕಿತ್ಸಾ ಕೇಂದ್ರ, ಎರಡು ಸಂಚಾರಿ ಆಸ್ಪತ್ರೆ ನಿರ್ಮಾಣದ ಗುರಿ ಹೊಂದಲಾಗಿದೆ. 2025 – 26 ರ ಒಳಗಾಗಿ ಈ ಎಲ್ಲವುಗಳನ್ನು ಸಂಪೂರ್ಣಗೊಳಿಸುವ ಗುರಿಯನ್ನು ಸರ್ಕಾರ ಹೊಂದಿದೆ.
ಹಾಗೆಯೇ ದೂರ ಸಂಪರ್ಕ ಕ್ಷೇತ್ರದಲ್ಲಿ ಸುಧಾರಣೆ ತರುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದೆ. ಇದು ದೂರಸಂಪರ್ಕ ಕಂಪೆನಿಗಳ ಜೊತೆಗೆ ಮೊಬೈಲ್ ಬಳಕೆದಾರರಿಗೂ ಹೆಚ್ಚು ಅನುಕೂಲ ಒದಗಿಸಲಿದೆ. ಮುಂದಿನ ದಿನಗಳಲ್ಲಿ ಕೆವೈಸಿಯನ್ನು ಡಿಜಿಟಲೀಕರಣ ಮಾಡುವುದಾಗಿಯೂ ಸರ್ಕಾರ ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.