ನವದೆಹಲಿ: ದೇಶದ ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಈ ವರೆಗೆ ಸುಮಾರು 76 ಕೋಟಿಯ 11 ಲಕ್ಷಕ್ಕೂ ಅಧಿಕ ಕೊರೋನಾ ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯವು ತಿಳಿಸಿದೆ.
ಹಾಗೆಯೇ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು, ಖಾಸಗಿ ಆಸ್ಪತ್ರೆಗಳಿಗೆ ಸಂಬಂಧಿಸಿದಂತೆ ಇನ್ನೂ 5 ಕೋಟಿ 33 ಲಕ್ಷಕ್ಕೂ ಅಧಿಕ ಲಸಿಕೆಗಳು ಬಳಕೆಯಾಗದೆ ಉಳಿದಿರುವುದಾಗಿಯೂ ತನ್ನ ವರದಿಯಲ್ಲಿ ತಿಳಿಸಿದೆ.
ಕೊರೋನಾ ಲಸಿಕೆಯನ್ನು ಸಾರ್ವತ್ರಿಕವಾಗಿ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ನೀಡುವ ಅಭಿಯಾನ ಈ ವರ್ಷದ ಜೂನ್ 21 ರಂದು ಆರಂಭವಾಗಿದೆ. ಕೇಂದ್ರ ಸರ್ಕಾರ ಈ ಅಭಿಯಾನದ ಭಾಗವಾಗಿ ಎಲ್ಲರಿಗೂ ಲಸಿಕೆ ನೀಡುವ ಉದ್ದೇಶದಿಂದ ಎಲ್ಲಾ ಕೇಂದ್ರಾಡಳಿತ, ರಾಜ್ಯಗಳಿಗೆ ಉಚಿತವಾಗಿ ಲಸಿಕೆ ನೀಡುತ್ತಿದೆ. ಆ ಮೂಲಕ ಲಸಿಕಾ ಅಭಿಯಾನವನ್ನು ಬೆಂಬಲಿಸುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.