ನೈನಿತಾಲ್: ಕೊರೋನಾ ಹಿನ್ನೆಲೆಯಲ್ಲಿ ಸ್ಥಗಿತವಾಗಿರುವ ಉತ್ತರಾಖಂಡ್ನ ಚಾರ್ಧಾಮ್ ಯಾತ್ರೆ ಮೇಲಿನ ನಿಷೇಧವನ್ನು ನೈನಿತಾಲ್ ಹೈಕೋರ್ಟ್ ತೆರವುಗೊಳಿಸಿದೆ.
ಆದರೆ ಕೊರೋನಾ ನಿಯಂತ್ರಣಕ್ಕಾಗಿ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲನೆ ಮಾಡುವಂತೆಯೂ ನ್ಯಾಯಾಲಯವು ಸೂಚಿಸಿದೆ. ಹಾಗೆಯೇ ನಿತ್ಯ ಕೇದಾರನಾಥದಲ್ಲಿ 800 ಜನರಿಗೆ, ಬದರಿನಾಥದಲ್ಲಿ 1200 ಜನರಿಗೆ, ಗಂಗೋತ್ರಿಯಲ್ಲಿ 600 ಜನರು ಮತ್ತು ಯಮುನೋತ್ರಿ ಧಾಮದಲ್ಲಿ 400 ಭಕ್ತರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.
ಇನ್ನು ಚಾರ್ಧಾಮ್ ಯಾತ್ರೆ ಕೈಗೊಳ್ಳುವ ಭಕ್ತರು ಕಡ್ಡಾಯವಾಗಿ ಕೊರೋನಾ ನೆಗೆಟಿವ್ ವರದಿ, ಎರಡೂ ಡೋಸ್ ಲಸಿಕೆ ಪಡೆದುಕೊಂಡಿರುವ ಪ್ರಮಾಣಪತ್ರ ತರುವುದನ್ನು ಕಡ್ಡಾಯಗೊಳಿಸಿ ಕೋರ್ಟ್ ಆದೇಶ ನೀಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.