ಬೆಂಗಳೂರು: ವಿಧಾನಸಭೆಯಲ್ಲಿ ಗ್ರಾಮ ಸ್ವರಾಜ್ ಮತ್ತು ಗ್ರಾಮ ಪಂಚಾಯತ್ ತಿದ್ದುಪಡಿ ಮಸೂದೆಗೆ ಅಂಗೀಕಾರ ದೊರೆತಿದೆ.
ಈ ವಿಧೇಯಕ ಮಂಡನೆ ನಡೆಸುವ ಸಂದರ್ಭದಲ್ಲಿ ಪ್ರತಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದರೂ ,ವಿಧಾನ ಸಭೆಯಲ್ಲಿ ಆಡಳಿತಾರೂಢ ಬಿಜೆಪಿ ಈ ಮಸೂದೆ ಮಂಡಿಸಿ, ಅಂಗೀಕಾರ ಪಡೆದಿದೆ. ಈ ವಿದೇಯಕದ ಮೂಲಕ ತಾಲೂಕು ಮತ್ತು ಜಿಲ್ಲಾ ಪಂಚಾಯತ್ ಕ್ಷೇತ್ರಗಳ ಪುನರ್ವಿಂಗಡಣೆ ಕಾರ್ಯ ನಡೆಯಲಿದೆ.
ಈ ತಿದ್ದುಪಡಿ ಮಸೂದೆ ಜಾರಿಯಾದ ತಕ್ಷಣದಿಂದ ತಾಲೂಕು ಪಂಚಾಯತ್ ಮತ್ತು ಜಿಲ್ಲಾ ಪಂಚಾಯತ್ ಕ್ಷೇತ್ರಗಳ ಎಲ್ಲಾ ಕ್ಷೇತ್ರಗಳ ಪುನರ್ವಿಂಗಡಣೆ ಅಧಿಸೂಚನೆ ರದ್ದಾಗಲಿದೆ. ಕ್ಷೇತ್ರ ಪುನರ್ವಿಂಗಡಣೆ ಆಧಾರದ ಮೇಲೆ ಜಾರಿಯಲ್ಲಿರುವ ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ಗಳ ಕ್ಷೇತ್ರಗಳ ಮೀಸಲಿರಿಸುವ ಎಲ್ಲಾ ಅಧಿಸೂಚನೆಗಳು ರದ್ದಾಗಲಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.