ಬೆಂಗಳೂರು: ರಾಜ್ಯದಲ್ಲಿ ಅಕ್ರಮ ವಲಸಿಗರು ನೆಲೆಸಿದ್ದರೆ, ಅವರ ಮೇಲೆ ಕ್ರಮ ಕೈಗೊಳ್ಳಲಾಗುವುದು. ಕರ್ನಾಟಕವನ್ನು ಯಾವುದೇ ಕಾರಣಕ್ಕೂ ಧರ್ಮಛತ್ರವಾಗಲು ಬಿಡುವುದಿಲ್ಲ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.
ರಾಜ್ಯ ಸರ್ಕಾರಕ್ಕೆ ಬದ್ಧತೆ ಇದೆ. ರಾಜ್ಯದೊಳಗೆ ಅಕ್ರಮವಾಗಿ ನೆಲೆಸಿರುವ ವಲಸಿಗರಿದ್ದರೆ ಅವರ ಮೇಲೆ ಕಣ್ಣಿಡುವ, ಅವರ ವಿರುದ್ಧ ಕ್ರಮ ವಹಿಸುವಂತೆ ಸೂಚಿಸಲಾಗಿದೆ. ರೋಹಿಂಗ್ಯಾಗಳನ್ನು ಹೊರಗಟ್ಟಲು ಕೇಂದ್ರ ಸರ್ಕಾರದ ಮಾರ್ಗಸೂಚಿ ಇನ್ನೂ ಬಂದಿಲ್ಲ ಎಂದು ಅವರು ಹೇಳಿದ್ದಾರೆ.
ಹಾಗೆಯೇ, ರಾಜ್ಯದಲ್ಲಿ ನೆಲೆಸಿರುವ ವಲಸಿಗರ ಚಲನ ವಲನಗಳನ್ನು ಗಮನಿಸುವಂತೆಯೂ ಸೂಚಿಸಲಾಗಿದೆ. ಆಂತರಿಕ ಭದ್ರತಾ ಅಧಿಕಾರಿಗಳು ವಲಸಿಗರ ವಸತಿ ಪರಿಶೀಲನೆ ನಡೆಸುತ್ತಿದ್ದಾರೆ. ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ವಿದೇಶಿಗರು ಅಕ್ರಮ ಚಟುವಟಿಕೆಗಳನ್ನು ನಡೆಸಲು ಬಿಡುವುದಿಲ್ಲ. ವಿಸಾ ಮುಗಿದಿದ್ದರೆ ಏನು ಕ್ರಮ ತೆಗೆದುಕೊಳ್ಳಬೇಕು ಎಂಬುದರ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಅಕ್ರಮ ವಲಸಿಗರು, ವಿದೇಶಿಗರ ಬಗ್ಗೆ ಸರ್ಕಾರ ಎಚ್ಚರಿಕೆ ವಹಿಸಿದೆ. ಯಾವ ಕಾರಣಕ್ಕೂ ರಾಜ್ಯವನ್ನು ಧರ್ಮಛತ್ರವಾಗಲು ಸರ್ಕಾರ ಬಿಡುವುದಿಲ್ಲ ಎಂದು ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.