ಕಲ್ಬುರ್ಗಿ: ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗಾಗಿ ಕೆಕೆಆರ್ಡಿಬಿಗೆ ನೀಡಲಾಗುತ್ತಿರುವ 1,500.ಕೋಟಿ ರೂ. ಅನುದಾನದ ಜೊತೆಗೆ 1,500 ಕೋಟಿ ರೂ. ಹೆಚ್ಚುವರಿ ಹಣ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.
ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ಕಲ್ಯಾಣ ಕರ್ನಾಟಕ ಉತ್ಸವಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಈ ಭಾಗದ ಸರ್ವತೋಮುಖ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ಈ ವರೆಗೂ ರಾಜ್ಯ ಸರ್ಕಾರ ಎಂಟು ಕೋಟಿಗೂ ಅಧಿಕ ಮೊತ್ತ ಬಿಡುಗಡೆ ಮಾಡಿದೆ. ಈ ಪೈಕಿ ಆರು ಕೋಟಿ ರೂ. ಈಗಾಗಲೇ ಖರ್ಚಾಗಿದೆ. ಎರಡು ಕೋಟಿ ರೂ. ಗಳು ಉಳಿದಿದ್ದು, ಮುಂದಿನ ಮಾರ್ಚ್ ಒಳಗಾಗಿ ಅದನ್ನು ಅಭಿವೃದ್ಧಿ ಕಾರ್ಯಗಳಿಗೆ ಬಳಕೆ ಮಾಡಲಾಗುತ್ತದೆ. ಆ ಬಳಿಕ ಹೆಚ್ಚುವರಿ 1500 ಕೋಟಿ ರೂ. ಗಳನ್ನು ಬಿಡುಗಡೆ ಮಾಡುವುದಾಗಿ ಅವರು ಹೇಳಿದ್ದಾರೆ.
ಹಾಗೆಯೇ ತಾವು ಯಾವುದೇ ರೀತಿಯ ಹೊಸ ಘೋಷಣೆಗಳನ್ನು ಹೊರಡಿಸುವುದಿಲ್ಲ. ಬದಲಾಗಿ, ಹಳೆಯ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಪೂರಕ ಕ್ರಮಗಳನ್ನು ಕೈಗೊಳ್ಳಲಾಗುವುದು. ಈ ಭಾಗಕ್ಕೆ ಸರ್ಕಾರದ ಇತರೆ ಇಲಾಖೆಗಳಿಗೆ ನೀಡಲಾಗುವ ಅನುದಾನಗಳಿಗೆ ಕತ್ತರಿ ಹಾಕುವುದಿಲ್ಲ ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.