ನವದೆಹಲಿ: ಪ್ರಧಾನಿ ಮೋದಿ ಅವರ 71 ನೇ ಜನ್ಮದಿನದ ಅಂಗವಾಗಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಸೇರಿದಂತೆ ಅನೇಕ ಗಣ್ಯರು ಶುಭಹಾರೈಸಿದ್ದಾರೆ.
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಪ್ರಧಾನಿ ಮೋದಿ ಅವರಿಗೆ ಶುಭಾಶಯಗಳನ್ನು ಕೋರಿ ಟ್ವೀಟ್ ಮಾಡಿದ್ದು, ನಾನು ನಿಮ್ಮ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯಕ್ಕಾಗಿ ಪ್ರಾರ್ಥಿಸುತ್ತೇನೆ. ನಿಮ್ಮಲ್ಲಿರುವ ಸೇವಾ ಮನೋಭಾವದಿಂದ ರಾಷ್ಟ್ರ ಸೇವೆಯನ್ನು ಮುಂದುವರಿಸಿ ಎಂದು ತಿಳಿಸಿದ್ದಾರೆ.
भारत के प्रधानमंत्री श्री @narendramodi को जन्मदिन की हार्दिक बधाई और शुभकामनाएं। मेरी शुभेच्छा है कि आप स्वस्थ रहें और दीर्घायु प्राप्त कर ‘अहर्निशं सेवामहे’ की अपनी सर्वविदित भावना के साथ राष्ट्र सेवा का कार्य करते रहें।
— President of India (@rashtrapatibhvn) September 17, 2021
ಹಾಗೆಯೇ ಉಪರಾಷ್ಟ್ರಪತಿ ನಾಯ್ಡು ಅವರು ಟ್ವೀಟ್ ಮಾಡಿದ್ದು, ಗೌರವಾನ್ವಿತ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರಿಗೆ ಜನ್ಮದಿನದ ಶುಭಾಶಯಗಳು. ಅವರ ಅಸಾಧಾರಣ ದೃಷ್ಟಿಕೋನ, ಅನುಕರಣೀಯ ನಾಯಕತ್ವ, ಸಮರ್ಪಿತ ಸೇವೆಯು ರಾಷ್ಟ್ರದ ಸರ್ವತೋಮುಖ ಬೆಳವಣಿಗೆಗೆ ಕಾರಣವಾಗಿದೆ. ದೇವರು ಅವರಿಗೆ ಆರೋಗ್ಯ, ಆಯಸ್ಸು, ಸಂತೋಷವನ್ನು ನೀಡಲಿ ಎಂದು ತಿಳಿಸಿದ್ದಾರೆ.
प्रधानमंत्री श्री नरेंद्रभाई मोदी को जन्मदिन की हार्दिक शुभकामनाएं! राष्ट्र की सेवा में समर्पित आपके स्वस्थ, सुदीर्घ यशस्वी जीवन की कामना करता हूं। @narendramodi pic.twitter.com/WAtAooTnnG
— Vice President of India (@VPSecretariat) September 17, 2021
ಪ್ರಧಾನಿ ಮೋದಿ ಅವರ 71 ನೇ ಜನ್ಮದಿನದ ಪ್ರಯುಕ್ತ ಬಿಜೆಪಿಯು ಇಂದಿನಿಂದ 21 ದಿನಗಳ ಕಾಲ ಸೇವೆ ಮತ್ತು ಸಮರ್ಪಣೆ ಅಭಿಯಾನ ಆರಂಭಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.