ಬೆಂಗಳೂರು: ಜನಪರ ಕಾರ್ಯಕ್ರಮಗಳ ಮೂಲಕ ವಿಶ್ವವಂದ್ಯ ನಾಯಕರಾಗಿ ಹೊರಹೊಮ್ಮಿರುವ ಪ್ರಧಾನಿ ನರೇಂದ್ರ ಮೋದಿ ಅವರ 71 ನೇ ಜನ್ಮದಿನದ ಪ್ರಯುಕ್ತ ರಾಜ್ಯ ಯುವ ಮೋರ್ಚಾ ವತಿಯಿಂದ, ರಾಜ್ಯ ಯುವ ಮೋರ್ಚಾ ಅಧ್ಯಕ್ಷ ಡಾ. ಸಂದೀಪ್ ಅವರ ಅಧ್ಯಕ್ಷತೆಯಲ್ಲಿ ಇಂದು ಡಿಜಿಟಲ್ ಎಲ್‍ಇಡಿ ವ್ಯಾನ್‍ಗೆ ನಗರದಲ್ಲಿ ಚಾಲನೆ ನೀಡಲಾಯಿತು.
ಪ್ರಧಾನಿ ಮೋದಿ ಅವರ 20 ವರ್ಷಗಳ ರಾಜಕೀಯ, ಸಾಮಾಜಿಕ ಜೀವನದ ತುಣುಕುಗಳನ್ನು ನವ ಭಾರತ್ ಮೇಳದಲ್ಲಿ ಪ್ರದರ್ಶಿಸುವ ಡಿಜಿಟಲ್ ಎಲ್‍ಇಡಿ ವ್ಯಾನ್ ಇದಾಗಿದೆ. ಬಿಜೆಪಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಅರುಣ್ ಕುಮಾರ್, ರಾಜ್ಯ ಸಚಿವ ಎಸ್.ಟಿ. ಸೋಮಶೇಖರ್, ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ಯುವ ಮೋರ್ಚಾ ರಾಷ್ಟ್ರೀಯ ಉಪಾಧ್ಯಕ್ಷ ಮಧುಕೇಶ್ವರ ದೇಸಾಯಿ ಅವರು ಈ ವ್ಯಾನ್‍ಗೆ ಚಾಲನೆ ನೀಡಿದರು.
ಪ್ರಧಾನಿ ಮೋದಿ ಅವರು ಜಾರಿಗೊಳಿಸಿದ ಜನಪರ- ಅಭಿವೃದ್ಧಿಗೆ ಪೂರಕವಾದ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಇದು ಉತ್ತಮ ಕಾರ್ಯ ಎಂದು ಅತಿಥಿಗಳು ಅಭಿಪ್ರಾಯಪಟ್ಟರು.
ಈ ಸಂದರ್ಭದಲ್ಲಿ ರಾಜ್ಯ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಅಜಿತ್ ಹೆಗ್ಡೆ, ಉಪಾಧ್ಯಕ್ಷ ವಸಂತ ಗೌಡ, ಕೋಶಾಧ್ಯಕ್ಷಶಅನಿಲ್ ಶೆಟ್ಟಿ, ರಾಜ್ಯ ಕಾರ್ಯಕಾರಿಣಿ ಸದಸ್ಯ ಜಗದೀಶ್ ಚಂದ್ರ ಮತ್ತು ಪ್ರಶಾಂತ್ ಕೆ ವಿ, ಬೆಂಗಳೂರಿನ ಮೂರು ಜಿಲ್ಲೆಗಳ ಅಧ್ಯಕ್ಷರು, ಯುವ ಮೋರ್ಚಾ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಬೆಂಗಳೂರಿನ ವಿವಿಧೆಡೆ ಸ್ವಚ್ಛತಾ ಕಾರ್ಯಕ್ರಮಗಳು, ಜೀವನ ಸಾಧನೆ ಕುರಿತು ಮಾಹಿತಿ ಕೊಡುವ ಕಾರ್ಯವನ್ನು ನಡೆಸಿದ್ದು, ಬಾಗಲಕೋಟೆ, ವಿಜಯಪುರ, ಬೀಳಗಿ ಸೇರಿದಂತೆ ರಾಜ್ಯದ ವಿವಿಧ ಕಡೆಗಳಲ್ಲಿ ಈ ವಾಹನದ ಮೂಲಕ ತೆರಳಿ ಜನೋಪಯೋಗಿ ಕಾರ್ಯಕ್ರಮಗಳನ್ನು ಸಂಘಟಿಸಲಾಗುವುದು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.