ಉಡುಪಿ: ದೇಶದಲ್ಲಿ ಮುಂದಿನ ಎರಡು ವರ್ಷಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸಿರಿಧಾನ್ಯಗಳನ್ನು ಉತ್ಪಾದಿಸುವ ಜೊತೆಗೆ, ಉತ್ತಮ ಗುಣಮಟ್ಟದ, ನೈಸರ್ಗಿಕ ಅಂಶಗಳನ್ನು ಒಳಗೊಂಡ ಸಿರಿಧಾನ್ಯಗಳನ್ನು ವಿದೇಶಕ್ಕೆ ರಫ್ತು ಮಾಡುವುದರ ಮೂಲಕ ದೇಶ ಇಡೀ ವಿಶ್ವಕ್ಕೆ ಸಿರಿಧಾನ್ಯ ರಫ್ತು ಮಾಡುವ ಹಬ್ ಆಗಲಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.
ಅವರು ಬ್ರಹ್ಮಾವರದ ಕೃಷಿ ವಿಜ್ಞಾನ ಕೇಂದ್ರದಲ್ಲಿ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿವಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ಸಿರಿಧಾನ್ಯ ವರ್ಷ 2023 ರ ಪ್ರಚಾರಾಂದೋಲನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಭಾರತ ಮಳೆಯಾಧರಿತ ಕೃಷಿಯನ್ನು ಅವಲಂಬಿಸಿರುವ ದೇಶ. ಇಲ್ಲಿನ ಹವಾಮಾನ ಸಿರಿಧಾನ್ಯ ಕೃಷಿಗೆ ಸೂಕ್ತವಾಗಿದೆ. ಸಿರಿಧಾನ್ಯಗಳಲ್ಲಿ ರಾಸಾಯನಿಕ ಅಂಶಗಳು ಕಡಿಮೆ ಇದ್ದು, ಹೆಚ್ಚು ಪ್ರಮಾಣದ ಕ್ಯಾಲ್ಸಿಯಂ, ಪ್ರೊಟೀನ್, ವಿಟಮಿನ್ ಅಂಶಗಳಿದ್ದು, ಅವು ಮಧುಮೇಹ ನಿಯಂತ್ರಣ ಸೇರಿದಂತೆ ಇನ್ನು ಹಲವಾರು ಸಮಸ್ಯೆಗಳಿಗೆ ವೈದ್ಯರು ಶಿಫಾರಸ್ಸು ಮಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಹಾಗೆಯೇ ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ನಿಟ್ಟಿನಲ್ಲಿಯೂ ಸಿರಿಧಾನ್ಯಗಳು ಸಹಕಾರಿಯಾಗಿವೆ. ಭಾರತದ ಬೇಡಿಕೆಯನ್ನು ಪರಿಗಣಿಸಿ ವಿಶ್ವಸಂಸ್ಥೆ 2023 ನೇ ವರ್ಷವನ್ನು ಅಂತಾರಾಷ್ಟ್ರೀಯ ಸಿರಿಧಾನ್ಯ ವರ್ಷವಾಗಿ ಘೋಷಿಸಿದೆ. ಈ ಅವಧಿಯಲ್ಲಿ ದೇಶದ ರೈತರು ಹೆಚ್ಚಿನ ಪ್ರಮಾಣದಲ್ಲಿ ಸಿರಿಧಾನ್ಯಗಳನ್ನು ಬೆಳೆದು, ಅಂತರಾಷ್ಟ್ರೀಯ ಮಾರುಕಟ್ಟೆಗೆ ರಫ್ತು ಮಾಡುವ ಮೂಲಕ ಆದಾಯ ಗಳಿಸಿಕೊಳ್ಳಬಹುದು ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.