ಬೆಂಗಳೂರು: ರಾಜ್ಯದಲ್ಲಿ ಆನ್ಲೈನ್ ಬೆಟ್ಟಿಂಗ್ ನಿಷೇಧದ ಪ್ರತಿಬಂಧಕ ಕಾಯ್ದೆಯ ಮಸೂದೆಯನ್ನು ಗೃಹಸಚಿವ ಅರಗ ಜ್ಞಾನೇಂದ್ರ ಅವರು ವಿಧಾನ ಸಭೆಯಲ್ಲಿ ಶುಕ್ರವಾರ ಮಂಡನೆ ಮಾಡಿದ್ದಾರೆ.
ಈ ಸಂಬಂಧ ಮಾತನಾಡಿರುವ ಅವರು, ಆನ್ಲೈನ್ ಜೂಜು ನಿಷೇಧಕ್ಕೆ ಸಂಬಂಧಿಸಿದಂತೆ ಇದೊಂದು ಮಹತ್ವದ ಹೆಜ್ಜೆಯಾಗಿದೆ. ಈ ಮಸೂದೆ ಮೊಬೈಲ್, ಕಂಪ್ಯೂಟರ್ ಮತ್ತಿತರ ಆನ್ಲೈನ್ ಜೂಜಾಟ ಮತ್ತು ಬೆಟ್ಟಿಂಗ್ಗೆ ಸಂಬಂಧಿಸಿದಂತೆ ಅನ್ವಯವಾಗಲಿದೆ. ಕಾನೂನು ಉಲ್ಲಂಘನೆ ಮಾಡಿ ಆನ್ಲೈನ್ ಜೂಜಾಡುವವರು, ಅವರಿಗೆ ಸಹಕಾರ ನೀಡುವವರು, ಆಶ್ರಯ ನೀಡುವವರಿಗೆ 6 ತಿಂಗಳ ಜೈಲು ಶಿಕ್ಷೆ, 10 ಸಾವಿರ ರೂ. ದಂಡ ವಿಧಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.
ಈ ಹಿಂದಿನ ಸಂಪುಟದಲ್ಲಿ ಆನ್ಲೈನ್ ಜೂಜು, ಆನ್ಲೈನ್ ಗೇಮ್ಗಳ ಮೂಲಕ ನಡೆಯುವ ಬೆಟ್ಟಿಂಗ್, ಜೂಜಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕರ್ನಾಟಕ ಪೊಲೀಸ್ ಕಾಯ್ದೆಗೆ ತಿದ್ದುಪಡಿ ತರಲು ನಿರ್ಧರಿಸಲಾಗಿತ್ತು. ಅದರಂತೆ ಈ ವಿಧೇಯಕ ಮಂಡಿಸಲಾಗಿದೆ. ಅಲ್ಲದೆ ಇಂತಹ ವಿಚಾರಗಳನ್ನು ಜಾಮೀನು ರಹಿತ ಅಪರಾಧವನ್ನಾಗಿ ಪರಿಗಣಿಸಲು ಅವಕಾಶ ಕಲ್ಪಿಸಲಾಗಿದೆ. ಇದರ ಬಗ್ಗೆ ಉಭಯ ಸದನಗಳಲ್ಲಿ ಚರ್ಚೆ ನಡೆದ ಬಳಿಕ ಇದು ಅಂಗೀಕಾರವಾಗಬೇಕಿದೆ. ಯಾವುದೇ ಸಂವಹನ ಸಾಧನದ ಮೂಲಕ ವರ್ಚುವಲ್ ವೇದಿಕೆಯಲ್ಲಿ ನಡೆಯುವ ಎಲ್ಲಾ ಗೇಮ್ಗಳು ಇದರ ವ್ಯಾಪ್ತಿಗೆ ಬರುತ್ತವೆ ಎಂದು ಅವರು ಸ್ಪಷ್ಟವಾಗಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.