ಬೆಂಗಳೂರು: ರಾಜ್ಯದಲ್ಲಿ 1 ಸಾವಿರ ಎಲೆಕ್ಟ್ರಿಕ್ ವಾಹನಗಳ ರಿಚಾರ್ಜಿಂಗ್ ಸೆಂಟರ್ ತೆರೆಯಲಾಗುವುದುಎಂದು ಇಂಧನ ಸಚಿವ ಸುನೀಲ್ ಕುಮಾರ್ ತಿಳಿಸಿದ್ದಾರೆ.
ಬೆಂಗಳೂರು ನಗರಕ್ಕೆ ಸಂಬಂಧಿಸಿದಂತೆ 500 ರಿಚಾರ್ಜಿಂಗ್ ಸೆಂಟರ್ಗಳನ್ನು ತೆರೆಯಲು ಚಿಂತನೆ ನಡೆಸಲಾಗಿದೆ ಎಂದು ಅವರು ಹೇಳಿದ್ದಾರೆ. ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸುವ ಸಲುವಾಗಿ ಈ ಕ್ರಮಕ್ಕೆ ಮುಂದಾಗಿರುವುದಾಗಿ ಅವರು ಹೇಳಿದ್ದಾರೆ.
ಈಗಾಗಲೇ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರಗಳು ಎಲೆಕ್ಟ್ರಿಕ್ ವಾಹನಗಳ ಬಳಕೆಯ ಉತ್ತೇಜನಕ್ಕೆ ಹಲವಾರು ಉಪಕ್ರಮಗಳನ್ನು ಹಮ್ಮಿಕೊಂಡಿದೆ. ಈ ನಿಟ್ಟಿನಲ್ಲಿ ಅಪಾರ್ಟ್ಮೆಂಟ್, ಮಾಲ್, ಸರ್ಕಾರಿ ಕಚೇರಿಗಳು, ರಾಷ್ಟ್ರೀಯ ಹೆದ್ದಾರಿ, ಪ್ರವಾಸೋದ್ಯಮ ಕ್ಷೇತ್ರಗಳಲ್ಲಿ ಎಲೆಕ್ಟ್ರಿಕ್ ರಿಚಾರ್ಜಿಂಗ್ ಪಾಯಿಂಟ್ ಸ್ಥಾಪಿಸಲಾಗುವುದು. ಈ ಸಂಬಂಧ ವಾಹನಗಳ ಮಾಲೀಕರ ಜೊತೆ ಚರ್ಚೆ ನಡೆಸುವುದಾಗಿ ತಿಳಿಸಿದ್ದಾರೆ.
ಭವಿಷ್ಯದಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆ ಹೆಚ್ಚಾಗಿದ್ದು, ಅದನ್ನು ತಡೆಯುವುದು ಅಸಾಧ್ಯ. ಈ ಸಂಬಂಧ ಎಲೆಕ್ಟ್ರಿಕ್ ವಾಹನಗಳ ರಿಚಾರ್ಜಿಂಗ್ ಸೆಂಟರ್ ಸ್ಥಾಪನೆಗೆ ಉದ್ದೇಶಿಸಲಾಗಿದೆ ಎಂದು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.