ಬೆಂಗಳೂರು: ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿರುವ ದೇಗುಲಗಳ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಅಧಿವೇಶನದಲ್ಲಿ ಪ್ರತ್ಯೇಕ ವಿಧೇಯಕಗಳನ್ನು ಮಂಡನೆ ಮಾಡಲು ಸರ್ಕಾರ ನಿರ್ಧರಿಸಿದೆ.
ಈ ಸಂಬಂಧ ಇಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ, ತೀರ್ಮಾನ ಕೈಗೊಂಡಿದ್ದಾರೆ.
ಈ ಸಭೆಯಲ್ಲಿ ಸಾರ್ವಜನಿಕ ಪ್ರದೇಶಗಳಲ್ಲಿ ಇರುವ ದೇವಾಲಯಗಳನ್ನು ತೆರವುಗೊಳಿಸದೇ ಇರುವ ಬಗ್ಗೆ ಸದನದಲ್ಲಿ ಪ್ರತ್ಯೇಕ ವಿಧೇಯಕ ಮಂಡನೆಗೆ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಮೂಲಗಳು ಹೇಳಿವೆ. ಇದು ಮೈಸೂರಿನ ದೇಗುಲ ತೆರವು ಕಾರ್ಯಾಚರಣೆ ಬಳಿಕ ನಡೆದ ಬೆಳವಣಿಗೆಗಳನ್ನು ಗಮನಿಸಿಕೊಂಡು ಸರ್ಕಾರ ತೆಗೆದುಕೊಂಡ ನಿರ್ಣಯವಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.