ಬೆಂಗಳೂರು: ಖಾಸಗಿ ವಿದ್ಯಾರ್ಥಿಗಳು, ಈ ಹಿಂದಿನ ಫಲಿತಾಂಶ ತಿರಸ್ಕರಿಸಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶವನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ಅವರು ಪ್ರಕಟಿಸಿದ್ದಾರೆ.
ದ್ವಿತೀಯ ಪಿಯುಸಿ ಪರೀಕ್ಷೆ ಬರೆದ ಖಾಸಗಿ ವಿದ್ಯಾರ್ಥಿಗಳು, ಈ ಹಿಂದೆ ನಡೆದಿದ್ದ ಪರೀಕ್ಷೆಯ ಫಲಿತಾಂಶವನ್ನು ನಿರಾಕರಿಸಿದ್ದ ವಿದ್ಯಾರ್ಥಿಗಳು ಮತ್ತು ಪುನರಾವರ್ತಿತ ವಿದ್ಯಾರ್ಥಿಗಳ ಫಲಿತಾಂಶವನ್ನು ಪ್ರಕಟಿಸಲಾಗಿದೆ.
ಈ ಪರೀಕ್ಷೆಗೆ ಒಟ್ಟು 18,414 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಇದರಲ್ಲಿ 17470 ವಿದ್ಯಾರ್ಥಿಗಳು ಖಾಸಗಿಯಾಗಿ, 351 ವಿದ್ಯಾರ್ಥಿಗಳು ರಿಪೀಟರ್ಸ್, 592 ಹೊಸ ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದಾರೆ.
ಈ ಪೈಕಿ 5,507 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 12,906 ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದಾರೆ ಎಂದು ಸಚಿವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.