ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಈ ವಾರ ಅಮೆರಿಕಕ್ಕೆ ಭೇಟಿ ನೀಡಲಿದ್ದು, ಈ ವೇಳೆ ಅವರು ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದಾರೆ ಮತ್ತು ಉನ್ನತ ಮಟ್ಟದ ಸಭೆಗಳನ್ನು ನಡೆಸಲಿದ್ದಾರೆ.
ಮೋದಿ ಸೆಪ್ಟೆಂಬರ್ 22 ರಂದು ವಾಷಿಂಗ್ಟನ್ ಡಿಸಿಗೆ ಆಗಮಿಸಲಿದ್ದು, ಮರುದಿನ ಬೆಳಿಗ್ಗೆ ಅವರು ಅಮೆರಿಕದ ಉನ್ನತ ಸಿಇಒಗಳನ್ನು ಭೇಟಿಯಾಗಲಿದ್ದಾರೆ. ಆಪಲ್ ಮುಖ್ಯಸ್ಥ ಟಿಮ್ ಕುಕ್ ಅವರೊಂದಿಗಿನ ಸಭೆ ಕೂಡ ಪಟ್ಟಿಯಲ್ಲಿದೆ. ಆದರೆ ಇನ್ನೂ ವೇಳಾಪಟ್ಟಿ ಅಂತಿಮಗೊಂಡಿಲ್ಲ.
ಅಮೆರಿಕದ ಉನ್ನತ ಉದ್ಯಮಿಗಳ ಜೊತೆಗಿನ ಭೇಟಿಯ ನಂತರ, ಮೋದಿ ಅವರು ಯುಎಸ್ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರನ್ನು ಭೇಟಿಯಾಗುವ ನಿರೀಕ್ಷೆಯಿದೆ.
ಅದೇ ದಿನ ಆಸ್ಟ್ರೇಲಿಯಾದ ಪ್ರಧಾನ ಮಂತ್ರಿ ಸ್ಕಾಟ್ ಮಾರಿಸನ್ ಮತ್ತು ಜಪಾನ್ ಪ್ರಧಾನಿ ಯೋಶಿಹೈಡ್ ಸುಗಾ ಅವರನ್ನು ಕೂಡ ಪ್ರಧಾನಿ ಭೇಟಿ ಮಾಡಲಿದ್ದಾರೆ.
ಮೋದಿ ಅವರು ಯುಎಸ್ ಅಧ್ಯಕ್ಷ ಜೋ ಬೈಡೆನ್ ಅವರೊಂದಿಗೆ ಮೊದಲ ದ್ವಿಪಕ್ಷೀಯ ಸಭೆಯನ್ನು ನಡೆಸಲಿದ್ದಾರೆ ಮತ್ತು ಸೆಪ್ಟೆಂಬರ್ 24 ರಂದು ವಾಷಿಂಗ್ಟನ್ನಲ್ಲಿ ನಡೆಯುವ ಮೊದಲ ಕ್ವಾಡ್ ನಾಯಕರ ಶೃಂಗಸಭೆಯಲ್ಲಿ ಭಾಗವಹಿಸುತ್ತಾರೆ.
ಪ್ರಧಾನಿ ಮೋದಿಯವರ ಭೇಟಿಯ ಸಮಯದಲ್ಲಿ ಭೋಜನವನ್ನು ಸಹ ಆಯೋಜಿಸಲಾಗಿದೆ.
ಸೆಪ್ಟೆಂಬರ್ 24 ರಂದು ಸಂಜೆ, ಪ್ರಧಾನಿ ಮೋದಿ ನ್ಯೂಯಾರ್ಕ್ಗೆ ತೆರಳಲಿದ್ದು, ಮರುದಿನ ಅವರು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾಷಣ ಮಾಡಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.