ಮೈಸೂರು: ಅನಧಿಕೃತ ನಿರ್ಮಾಣ ಎಂಬುದಾಗಿ ಪರಿಗಣಿಸಿ ಕೆಡವಲಾದ ನಂಜನಗೂಡಿನ ಮಹಾದೇವಮ್ಮ ದೇವಾಲಯವನ್ನು ಪುನರ್ ನಿರ್ಮಾಣ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ.
ಈ ದೇವಾಲಯವನ್ನು ನೆಲಸಮಗೊಳಿಸಿದ ಹಿನ್ನೆಲೆಯಲ್ಲಿ ಸಾರ್ವಜನಿಕ ವಲಯದಲ್ಲಿ ಅಧಿಕಾರಿಗಳು, ಸರ್ಕಾರದ ಮೇಲೆ ವ್ಯಾಪಕ ಆಕ್ರೋಶ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿತ್ತು. ಇದೀಗ ಈ ದೇವಾಲಯವನ್ನು ಮರು ನಿರ್ಮಾಣ ಮಾಡಲು ನಿರ್ಧರಿಸಲಾಗಿದ್ದು, ಇದರ ಶಂಕುಸ್ಥಾಪನೆಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಆಗಮಿಸಲಿದ್ದಾರೆ ಎಂದು ಸಂಸದ ಪ್ರತಾಪ ಸಿಂಹ ಅವರು ಟ್ವೀಟ್ ಮಾಡಿದ್ದಾರೆ.
ಇನ್ನು ಈ ದೇವಾಲಯದ ಪುನರ್ ನಿರ್ಮಾಣ ಕಾರ್ಯವನ್ನು ಮೂಲ ಸ್ಥಳದಿಂದ ಸ್ವಲ್ಪ ದೂರದಲ್ಲಿಯೇ ಮಾಡಲಾಗುತ್ತದೆ. ರಾಜ್ಯದಲ್ಲಿನ ದೇಗುಲಗಳ ಸಂರಕ್ಷಣೆಗೆ ಸರ್ಕಾರ ಸದಾ ಬದ್ಧವಾಗಿದೆ ಎಂದು ಅವರು ತಿಳಿಸಿದ್ದಾರೆ.
— Pratap Simha (@mepratap) September 20, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.