ಬೆಂಗಳೂರು: ಆಗಸ್ಟ್ 28 ಮತ್ತು 29 ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿರುವ 2021 ನೇ ಸಾಲಿನ ಸಿಇಟಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದೆ.
ರಾಜ್ಯದ ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥ್ ನಾರಾಯಣ್ ಅವರು ಸುದ್ದಿಗೋಷ್ಠಿ ನಡೆಸಿ ಸಿಇಟಿ ಫಲಿತಾಂಶ ಪ್ರಕಟಿಸಿದ್ದಾರೆ.
ಈ ಪರೀಕ್ಷೆಯಲ್ಲಿ ಎಲ್ಲಾ ವಿಭಾಗದಲ್ಲಿಯೂ ಮೈಸೂರಿನ ಪ್ರಮತಿ ಹಿಲ್ ವೀವ್ ಅಕಾಡೆಮಿಯ ಮೇಘನ್ ಎಚ್. ಕೆ. ಅವರು ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾರೆ.
ಈ ಬಾರಿ ರಾಜ್ಯದ ಒಟ್ಟು 530 ಕೇಂದ್ರಗಳಲ್ಲಿ ಸಿಇಟಿ ಪರೀಕ್ಷೆ ನಡೆದಿತ್ತು. 201834 ಅಭ್ಯರ್ಥಿಗಳು ಸಿಇಟಿ ಪರೀಕ್ಷೆಗೆ ನೋಂದಾಯಿಸಿದ್ದು, ಈ ಪೈಕಿ 193447 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ವಿದ್ಯಾರ್ಥಿಗಳು https://cetonline.karnataka.gov.in/kea/ ಲಿಂಕ್ ಮೂಲಕ ಫಲಿತಾಂಶ ಪಡೆಯಬಹುದಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.