ಬೆಂಗಳೂರು: ಮುಂದಿನ ವರ್ಷದಿಂದ ರಾಜ್ಯದ ಸಾಧಕ ರೈತರಿಗೂ ಗೌರವ ಡಾಕ್ಟರೇಟ್ ನೀಡಲು ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಹೊಸ ಚಿಂತನೆಯೊಂದನ್ನು ಮಾಡಿದೆ.
ಈ ಬಗ್ಗೆ ವಿವಿ ಕುಲಪತಿ ಡಾ. ಎಸ್. ರಾಜೇಂದ್ರ ಪ್ರಸಾದ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, ಈ ವರ್ಷದಿಂದಲೇ ಸಾಧಕ ರೈತರಿಗೆ ಗೌರವ ಡಾಕ್ಟರೇಟ್ ನೀಡುವ ಬಗ್ಗೆ ಚರ್ಚೆ ನಡೆದಿತ್ತು. ಆದರೆ, ಕೊರೋನಾ ಹಿನ್ನೆಲೆಯಲ್ಲಿ ಈ ಕಾರ್ಯ ಈ ವರ್ಷದಿಂದ ಜಾರಿಗೊಳಿಸುವುದು ಅಸಾಧ್ಯವಾಯಿತು. ಮುಂದಿನ ವರ್ಷದಿಂದ ಈ ಕ್ರಮವನ್ನು ಅನುಸರಿಸಲಾಗುತ್ತದೆ ಎಂದು ಹೇಳಿದ್ದಾರೆ.
ಕೃಷಿ ಕ್ಷೇತ್ರದಲ್ಲಿ ಹೊಸ ಹೊಸ ಆವಿಷ್ಕಾರಗಳನ್ನು ನಡೆಸಿ, ಮಾದರಿಯಾದ ಸಾಧಕ ರೈತರನ್ನು ಗೌರವಿಸುವುದು ಇದರ ಉದ್ದೇಶ. ಇಂತಹ ನಿರ್ಧಾರವನ್ನು ಈ ವರೆಗೆ ಯಾವ ವಿಶ್ವವಿದ್ಯಾಲಯ ಸಹ ಜಾರಿಗೊಳಿಸಿಲ್ಲ ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.