ಬೆಂಗಳೂರು: ಕೊರೋನಾ ಸೋಂಕಿನಿಂದ ಮೃತಪಟ್ಟ ಬಡ ಕುಟುಂಬದ ವ್ಯಕ್ತಿಯ ಕುಟುಂಬಸ್ಥರಿಗೆ ಮುಂದಿನ ಎರಡು – ಮೂರು ದಿನಗಳಲ್ಲಿ ತಲಾ 1 ಲಕ್ಷ ರೂ. ಪರಿಹಾರವನ್ನು ಸರ್ಕಾರ ಒದಗಿಸಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.
ಈ ಸಂಬಂಧ ವಿಧಾನಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಈಗಾಗಲೇ ಬಿಪಿಎಲ್ ಕಾರ್ಡ್ ಹೊಂದಿರುವ 7 – 8 ಸಾವಿರ ಕುಟುಂಬಗಳು ನೋಂದಣಿ ಮಾಡಿಕೊಂಡಿದ್ದು, ಅವರ ಖಾತೆಗಳಿಗೆ ಹಣವನ್ನು ಜಮೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
ಈ ಹಿಂದೆ ಸರ್ಕಾರ ಕೊರೋನಾ ಸೋಂಕಿನಿಂದ ತಮ್ಮವರನ್ನು ಕಳೆದುಕೊಂಡ ಬಡ ಕುಟುಂಬದವರಿಗೆ ತಲಾ 1 ಲಕ್ಷ ರೂ. ಪರಿಹಾರ. ಘೋಷಿಸಿತ್ತು. ಈ ಘೋಷಣೆಯಂತೆ ಮುಂದಿನ ಎರಡರಿಂದ ಮೂರು ದಿನಗಳಲ್ಲಿ ಪರಿಹಾರ ಧನವನ್ನು ಮೃತರ ಕುಟುಂಬ ಸದಸ್ಯರ ಖಾತೆಗೆ ಜಮೆ ಮಾಡುವುದಾಗಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.