ಬೆಂಗಳೂರು: ರಾಜ್ಯ ಸರ್ಕಾರದ ಮುಂದೆ ತಮ್ಮ ವಿವಿಧ ಬೇಡಿಕೆಗಳನ್ನು ಇರಿಸಿ ಪ್ರತಿಭಟನೆ ನಡೆಸಿದ್ದ ಸಾರಿಗೆ ನೌಕರರ ಮೇಲೆ ದಾಖಲಿಸಲಾದ ಮೊಕದ್ದಮೆಗಳನ್ನು ಹಿಂಪಡೆಯಲು ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
ಈ ಬಗ್ಗೆ ಸಾರಿಗೆ ಸಚಿವ ಶ್ರೀರಾಮುಲು ಅವರು ಮಾತನಾಡಿದ್ದು, ಈ ಸಂಬಂಧ ಇದರ ಸಾಧಕ ಬಾಧಕಗಳ ಬಗ್ಗೆ ನಾಲ್ಕು ನಿಗಮಗಳ ಅಧಿಕಾರಿಗಳ ಜೊತೆಗೆ ಚರ್ಚೆ ನಡೆಸಲಾಗಿದೆ. ಈ ಪ್ರತಿಭಟನೆಯಲ್ಲಿ ಕೆಲ ನೌಕರರು ಅಮಾನತಾಗಿದ್ದರು, ಇನ್ನು ಕೆಲವರು ವರ್ಗಾವಣೆ ಆಗಿದ್ದರು ಎಂದು ಅವರು ಹೇಳಿದ್ದಾರೆ.
ಇದರಿಂದ ಸುಮಾರು ಆರು ಸಾವಿರ ನೌಕರರು ತೊಂದರೆಗೀಡಾಗಿದ್ದರು. ನಾಲ್ಕು ಸಾವಿರ ನೌಕರರ ಮೇಲಿನ ಪ್ರಕರಣಗಳನ್ನು ಹಿಂಪಡೆಯಲಾಗಿದೆ. ಉಳಿದ ಎರಡು ಸಾವಿರ ಸಿಬ್ಬಂದಿ ಜೊತೆ ಮಾತನಾಡಲಾಗುತ್ತದೆ. ಕಾನೂನು ತಜ್ಞರ ಜೊತೆ ಮಾತನಾಡಿ ಅವರ ಮೇಲಿನ ಪ್ರಕರಣ ಹಿಂಪಡೆಯಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.