ಬೆಂಗಳೂರು: ರಾಜ್ಯದ ಚಿತ್ರಮಂದಿರಗಳಲ್ಲಿ ಕೊರೋನಾ ಲಾಕ್ಡನ್ ಹಿನ್ನೆಲೆಯಲ್ಲಿ ಹೇರಲಾಗಿದ್ದ ನಿಷೇಧವನ್ನು ತೆರವುಗೊಳಿಸಿ, 100% ಗಳಷ್ಟು ಆಸನ ಭರ್ತಿಗೆ ಕ್ರಮ ಕೈಗೊಳ್ಳುವ ಸಂಬಂಧ ಮುಂದಿನ ಎರಡು ಮೂರು ದಿನಗಳಲ್ಲಿ ತಾಂತ್ರಿಕ ಸಲಹಾ ಸಮಿತಿ ಜೊತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.
ಅವರು ನಗರದಲ್ಲಿ ಇಂದು ಚಿತ್ರ ನಿರ್ಮಾಪಕರ ಜೊತೆಗೆ ಸಭೆ ನಡೆಸಿ ಮಾತನಾಡಿ, ಸಿಎಂ ಬಸವರಾಜ ಬೊಮ್ಮಾಯಿ ಅವರೊಂದಿಗೆ ಮತ್ತು ತಜ್ಞರ ಜೊತೆಗೆ ಚರ್ಚೆ ನಡೆಸಿ ಮುಂದಿನ ಎರಡು ಮೂರು ದಿನಗಳಲ್ಲಿಯೇ ನಿರ್ಧಾರ ಪ್ರಕಟಿಸುವುದಾಗಿ ಭರವಸೆ ನೀಡಿದ್ದಾರೆ.
ಕಳೆದ ಒಂದೂವರೆ ವರ್ಷಗಳಿಂದ ಕೊರೋನಾ ಕಾರಣದಿಂದ ಚಿತ್ರಮಂದಿರಗಳು ಸಂಪೂರ್ಣ ತೆರೆಯದೇ ಇದ್ದು, ಚಿತ್ರೋದ್ಯಮದ ಸಂಕಷ್ಟದಲ್ಲಿದೆ. ಈ ನಿಟ್ಟಿನಲ್ಲಿ ಚಿತ್ರಮಂದಿರಗಳನ್ನು ಪೂರ್ಣ ಪ್ರಮಾಣದಲ್ಲಿ ತೆರೆಯಲು ಅವಕಾಶ ನೀಡುವಂತೆ ನಿರ್ಮಾಪಕರು ಮನವಿ ಮಾಡಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಸಚಿವರು ಅವರಿಗೆ ಈ ಭರವಸೆ ನೀಡಿದ್ದಾರೆ.
ಪ್ರಸ್ತುತ ಚಿತ್ರಮಂದಿರಗಳಲ್ಲಿ 50% ಆಸನ ಭರ್ತಿಗೆ ಅವಕಾಶ ನೀಡಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.