ನವದೆಹಲಿ: ಚುನಾವಣೆಯಲ್ಲಿ ಜಯಗಳಿಸಿದ ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೋ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಅಭಿನಂದನೆಗಳನ್ನು ತಿಳಿಸಿದ್ದಾರೆ ಮತ್ತು ಭಾರತ-ಕೆನಡಾ ಸಂಬಂಧಗಳನ್ನು ಮತ್ತಷ್ಟು ಬಲಪಡಿಸಲು ಅವರೊಂದಿಗೆ ಕೆಲಸ ಮಾಡುವುದನ್ನು ಮುಂದುವರಿಸಲು ಎದುರು ನೋಡುತ್ತಿದ್ದೇನೆ ಎಂದು ಹೇಳಿದ್ದಾರೆ.
ಟ್ರೂಡೊ ಅವರು ಕೆನಡಾ ಸಂಸತ್ತಿನ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ. ಆದರೆ ತಾನು ಬಯಸಿದ ಬಹುಮತವನ್ನು ಪಡೆಯಲು ವಿಫಲರಾಗಿದ್ದಾರೆ. ಆದರೂ ಅವರು ಪ್ರಬಲ ಅಲ್ಪಸಂಖ್ಯಾತ ಸರ್ಕಾರವನ್ನು ಮುನ್ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅವರ ಸರ್ಕಾರವನ್ನು ವಿರೋಧಪಕ್ಷಗಳಿಗೆ ಉರುಳಿಸುವುದು ಅಷ್ಟು ಸುಲಭವಲ್ಲ.
ಮೋದಿ ಟ್ವೀಟ್ ಮಾಡಿ, “ಪ್ರಧಾನಮಂತ್ರಿ ಜಸ್ಟಿನ್ ಟ್ರೂಡೊ ಅವರಿಗೆ ಚುನಾವಣಾ ಗೆಲುವಿಗಾಗಿ ಅಭಿನಂದನೆಗಳು. ಭಾರತ-ಕೆನಡಾ ಸಂಬಂಧಗಳನ್ನು ಮತ್ತಷ್ಟು ಬಲಪಡಿಸಲು ಮತ್ತು ಜಾಗತಿಕ ಮತ್ತು ಬಹುಪಕ್ಷೀಯ ವಿಷಯಗಳಲ್ಲಿ ನಮ್ಮ ಸಹಕಾರವನ್ನು ಹೆಚ್ಚಿಸಲು ನಿಮ್ಮೊಂದಿಗೆ ಕೆಲಸ ಮಾಡುವುದನ್ನು ಮುಂದುವರಿಸಲು ನಾನು ಎದುರು ನೋಡುತ್ತಿದ್ದೇನೆ” ಎಂದಿದ್ದಾರೆ.
Congratulations Prime Minister @JustinTrudeau on your victory in the elections! I look forward to continue working with you to further strengthen India-Canada relations, as well as our cooperation on global and multilateral issues.
— Narendra Modi (@narendramodi) September 22, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.