ಬೆಂಗಳೂರು: ಕಳೆದ ಒಂದು ವರ್ಷದ ಹಿಂದೆ ಸದ್ದು ಮಾಡಿದ್ದ ಡಿ. ಜೆ. ಹಳ್ಳಿ ಮತ್ತು ಕೆ. ಜಿ. ಹಳ್ಳಿ ಗಲಭೆಗೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯೋರ್ವನನ್ನು ಎನ್ಐಎ ಮತ್ತು ಬೆಂಗಳೂರು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ವಶಪಡಿಸಿಕೊಳ್ಳಲಾದ ಆರೋಪಿಯನ್ನು ತಬ್ರೇಜ್ (35) ಎಂದು ಗುರುತಿಸಲಾಗಿದೆ. ಈತ ಸಾಮಾಜಿಕ ಜಾಲತಾಣಗ ವಾಟ್ಸಾಪ್ ಮುಖೇನ ಬೆಂಗಳೂರು ಗಲಭೆಗೆ ಪ್ರಚೋದನೆ ನೀಡಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗಲಭೆಯ ಸಂದರ್ಭದಲ್ಲಿ ಪೊಲೀಸ್ ಠಾಣೆ, ವಾಹನಗಳು ಸೇರಿದಂತೆ ಸಾರ್ವಜನಿಕ ಆಸ್ತಾ ಪಾಸ್ತಿಗಳು ನಾಶವಾಗಿದ್ದವು. ಪೊಲೀಸ್ ವಾಹನಗಳಿಗೂ ಬೆಂಕಿ ಹಚ್ಚಲಾಗಿತ್ತು. ಈ ಆರೋಪಿಯ ಹೆಸರು ಚಾರ್ಜ್ ಶೀಟ್ನಲ್ಲಿಯೂ ಉಲ್ಲೇಖವಾಗಿತ್ತು. ಆದರೆ ಘಟನೆಯ ಬಳಿಕ ಈತ ತಲೆಮರೆಸಿಕೊಂಡಿದ್ದನು.
ಈತನ ಬಗ್ಗೆ ದೊರೆತ ತಾಂತ್ರಿಕ ಮಾಹಿತಿಯನ್ನು ಆಧರಿಸಿ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು ಈತನನ್ನು ಬಂಧಿಸಿದ್ದಾರೆ. ಈತ ಸಂಗಾಯ್ಪುರ ವಾರ್ಡ್ನ ಎಸ್ಡಿಪಿಐನ ಸಕ್ರಿಯ ಸದಸ್ಯನಾಗಿದ್ದ ಎಂಬುದಾಗಿಯೂ ಅಧಿಕಾರಿಗಳು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.