ಬೆಂಗಳೂರು: ಕೇಂದ್ರ ಸರ್ಕಾರದ ಟೆಲಿಮೆಡಿಸಿನ್ ಯೋಜನೆ ಇ- ಸಂಜೀವನಿ ಮೂಲಕ ರಾಜ್ಯದಲ್ಲಿ ಈ ವರೆಗೆ 22,57,994 ಸಲಹೆಗಳನ್ನು ನೀಡುವ ಮೂಲಕ ಕರ್ನಾಟಕ ಎರಡನೇ ಸ್ಥಾನವನ್ನು ಅಲಂಕರಿಸಿದೆ.
ಇ-ಸಂಜೀವನಿ ಮೂಲಕ ದೇಶದಲ್ಲಿ ಈ ವರೆಗೆ 1.2 ಕೋಟಿ ಸಲಹೆಗಳನ್ನು ನೀಡಲಾಗಿದ್ದು, ಈ ಪೈಕಿ ಹೆಚ್ಚು ಸೇವೆಗಳನ್ನು ಒದಗಿಸಿದ ಆಂಧ್ರಪ್ರದೇಶ ಮೊದಲ ಸ್ಥಾನದಲ್ಲಿದೆ. ಆಂಧ್ರಪ್ರದೇಶ 37,04,258 ಸಲಹೆಗಳನ್ನು ಸಾರ್ವಜನಿಕರಿಗೆ ನೀಡಿ ಮೊದಲನೇ ಸ್ಥಾನದಲ್ಲಿದೆ. ಎರಡನೇ ಸ್ಥಾನವನ್ನು ಕರ್ನಾಟಕ ಪಡೆದುಕೊಂಡಿದೆ.
ಮೂರನೇ ಸ್ಥಾನದಲ್ಲಿ ತಮಿಳುನಾಡು, ನಾಲ್ಕನೇ ಸ್ಥಾನದಲ್ಲಿ ಉತ್ತರ ಪ್ರದೇಶ ಇದೆ. ನಂತರದ ಸ್ಥಾನಗಳನ್ನು ಗುಜರಾತ್, ಮಧ್ಯಪ್ರದೇಶ, ಬಿಹಾರ, ಮಹಾರಾಷ್ಟ್ರ, ಪಂ. ಬಂಗಾಳಗಳು ಪಡೆದಿವೆ. ಕೊರೋನಾ ಸೋಂಕು ಅಧಿಕವಾಗಿದ್ದ ಸಂದರ್ಭದಲ್ಲಿ ಜನರಿಗೆ ಮನೆಯಿಂದಲೇ ಆರೋಗ್ಯ ಕಾಪಾಡಿಕೊಳ್ಳುವುದು, ಸಮಾಲೋಚನೆ ನೀಡುವುದಕ್ಕಾಗಿ ಇ-ಸಂಜೀವನಿ ಯೋಜನೆಯನ್ನು ಜಾರಿಗೆ ತರಲಾಗಿತ್ತು. ಈ ಯೋಜನೆ ಇದೀಗ ಮಹತ್ವದ ಸಾಧನೆ ಮೆರೆದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.