ನವದೆಹಲಿ: ಇದೇ ಮೊದಲ ಬಾರಿಗೆ ರಾಷ್ಟ್ರೀಯ ಪೊಲೀಸ್ ಸ್ಮರಣಾರ್ಥ ದಿನದಂದು ಕೇಂದ್ರ ಸರಕಾರವು ಪ್ಯಾರಾಮಿಲಿಟರಿಯ ಹುತಾತ್ಮರ ಕುಟುಂಬ ಸದಸ್ಯರನ್ನು ಆಹ್ವಾನಿಸಲು ನಿರ್ಧರಿಸಿದೆ. ಅಕ್ಟೋಬರ್ 21ರಂದು ರಾಷ್ಟ್ರೀಯ ಪೊಲೀಸ್ ಸ್ಮರಣಾರ್ಥ ದಿನವನ್ನು ಆಚರಣೆ ಮಾಡಲಾಗುತ್ತದೆ.
ಈ ವೇಳೆ ನಡೆಯಲಿರುವ ಸಮಾರಂಭಕ್ಕೆ ಎಲ್ಲಾ ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆ ಮತ್ತು ಪೊಲೀಸ್ ಇಲಾಖೆಗಳ ಹುತಾತ್ಮರ ಸುಮಾರು 200 ಕುಟುಂಬ ಸದಸ್ಯರನ್ನು ಆಹ್ವಾನಿಸಲಾಗುತ್ತಿದೆ.
ಅಕ್ಟೋಬರ್ 21 ರಿಂದ ಅಕ್ಟೋಬರ್ 30ರ ವರೆಗೆ ಹತ್ತು ದಿನಗಳವರೆಗೆ ಸಮಾರಂಭ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ. ಈ ಸಂದರ್ಭದಲ್ಲಿ ರಾಷ್ಟ್ರೀಯ ಪೊಲೀಸ್ ಸ್ಮಾರಕದ ಥಿಯೇಟರ್ನಲ್ಲಿ ಹುತಾತ್ಮರಿಗೆ ಸಂಬಂಧಿಸಿದ 3ರಿಂದ 5 ನಿಮಿಷಗಳ ವಿಡಿಯೋ, ಚಿತ್ರ ಮತ್ತು ಲೇಖನವನ್ನು ಪ್ರದರ್ಶಿಸಲಾಗುತ್ತದೆ.
ಈ ಸಂದರ್ಭದಲ್ಲಿ ಕುಟುಂಬ ಸದಸ್ಯರು ಹುತಾತ್ಮರಿಗೆ ಪುಷ್ಪ ನಮನ ಸಲ್ಲಿಸಲಿದ್ದಾರೆ. ಬಳಿಕ ಸ್ಮಾರಕದಲ್ಲಿ ಹುತಾತ್ಮರ ಹೆಸರನ್ನು ಬರೆದ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ಅಲ್ಲಿ ಫೋಟೋ ತೆಗೆಯುವ ಅವಕಾಶವೂ ಅವರಿಗೆ ಸಿಗಲಿದೆ.
1947 ರ ಬಳಿಕ ಕರ್ತವ್ಯದ ಸಂದರ್ಭದಲ್ಲಿ ಹುತಾತ್ಮರಾದ ಪೊಲೀಸರು ಮತ್ತು ಪ್ಯಾರಾಮಿಲಿಟರಿ ಪಡೆಯ ಸಿಬ್ಬಂದಿಯನ್ನು ಗೌರವಿಸುವ ಸಲುವಾಗಿ ರಾಷ್ಟ್ರೀಯ ಪೊಲೀಸ್ ಸ್ಮಾರಕವನ್ನು ನಿರ್ಮಾಣ ಮಾಡಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.