ಬೆಂಗಳೂರು: ರಾಜ್ಯದಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲಾ ನಾಗರಿಕರು ಮತದಾನದ ಹಕ್ಕನ್ನು ಪಡೆಯುವಂತಾಗಲು ವಿಶೇಷ ನೋಂದಣಿ ಅಭಿಯಾನ ಒಂದನ್ನು ರಾಜ್ಯದ ಮುಖ್ಯ ಚುನಾವಣಾಧಿಕಾರಿಯವರ ಕಚೇರಿ ಆರಂಭಿಸಿದೆ.
ನವೆಂಬರ್ 2021 ರ 7, 14, 21 ಮತ್ತು 28 ನೇ ಭಾನುವಾರಗಳಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯ ವರೆಗೆ ಮತದಾರರ ಪಟ್ಟಿಯಲ್ಲಿ ಸೇರಲು ವಿಶೇಷ ನೋಂದಣಿ ಅಭಿಯಾನವನ್ನು ನಡೆಸಲು ಸಿದ್ಧತೆ ನಡೆಸಿದೆ.
ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ 2022 ರಡಿಯಲ್ಲಿ, ಕರಡು ಮತದಾರರ ಪಟ್ಟಿಯಲ್ಲಿ 18 ವರ್ಷ ಮೇಲ್ಪಟ್ಟ ಅರ್ಹರನ್ನು ಸೇರ್ಪಡೆ ಮಾಡಲು ಈ ಅಭಿಯಾನ ನಡೆಯುತ್ತಿದೆ. ವಿಳಾಸದ ಪುರಾವೆಗಾಗಿ ಐಡಿ, ಎರಡು ಪಾಸ್ಪೋರ್ಟ್ ಅಳತೆ ಭಾವಚಿತ್ರಗಳ ಜೊತೆಗೆ ಹತ್ತಿರದ ಮತದಾನ ಕೇಂದ್ರಕ್ಕೆ ಭೇಟಿ ನೀಡಿ, ನೋಂದಣಿ ಮಾಡಿಕೊಳ್ಳುವಂತೆ ರಾಜ್ಯ ಚುನಾವಣಾಧಿಕಾರಿಗಳ ಕಚೇರಿ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.