ವಿಜಯನಗರ: ಅಕ್ಟೋಬರ್ ತಿಂಗಳ ಆರಂಭದಲ್ಲಿ ಹಂಪಿಯಲ್ಲಿ ಹೆಲಿ – ಟೂರಿಸಂ ಆರಂಭ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಮೂಲಗಳು ಹೇಳಿವೆ.
ಪ್ರವಾಸೋದ್ಯಮ ಅಭಿವೃದ್ಧಿಯ ಹಿನ್ನೆಲೆಯಲ್ಲಿ ಇಲಾಖೆಯಿಂದ ಕೈಗೊಳ್ಳಲಾದ ಪ್ರಮುಖ ಯೋಜನೆಗಳಲ್ಲಿ ಹೆಲಿ ಟೂರಿಸಂ ಸಹ ಒಂದಾಗಿದ್ದು, ಈ ಯೋಜನೆಯ ಆರಂಭಿಕ ಭಾಗವಾಗಿ ಹಂಪಿಯನ್ನು ಆಯ್ಕೆ ಮಾಡಲಾಗಿದೆ. ಅಕ್ಟೋಬರ್ ಮೊದಲ ವಾರದಲ್ಲಿ ಹಂಪಿಯಲ್ಲಿ ಹೆಲಿ ಟೂರಿಸಂ ಆರಂಭವಾಗಲಿದೆ ಎಂದು ವರದಿಗಳು ತಿಳಿಸಿವೆ.
ಈ ಸಂಬಂಧ ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಈ ಯೋಜನೆಗೆ ಪೂರಕವೆಂಬಂತೆ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ತಿಳಿಸಿದ್ದಾರೆ. ಕಮಲಾಪುರದ ಹೆಲಿಪ್ಯಾಡ್ ಮೂಲಕ ಪ್ರವಾಸ ಆರಂಭಿಸಲಾಗುತ್ತದೆ ಎಂದು ಹೇಳಲಾಗುತ್ತಿದೆ. ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ ಈ ಸೇವೆಯನ್ನು ಒದಗಿಸಲಿದ್ದು, ವೆಚ್ಚಗಳ ಬಗ್ಗೆ ಇನ್ನಷ್ಟೇ ತಿಳಿಯಬೇಕಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.