ನವದೆಹಲಿ: ಕ್ವಾಡ್ ಲೀಡರ್ಸ್ ಶೃಂಗಸಭೆಯಲ್ಲಿ ಭಾಗವಹಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಅಮೆರಿಕಾಗೆ ಪ್ರಯಾಣ ಬೆಳೆಸಿದ್ದಾರೆ.
ಇದಕ್ಕೂ ಮುನ್ನ ಮಾತನಾಡಿದ ಮೋದಿ, ತಮ್ಮ ಭೇಟಿ ಅಮೆರಿಕ, ಜಪಾನ್ ಮತ್ತು ಆಸ್ಟ್ರೇಲಿಯಾದೊಂದಿಗೆ ಕಾರ್ಯತಂತ್ರದ ಪಾಲುದಾರಿಕೆಯನ್ನು ಬಲಪಡಿಸಲು ಸುಸಂದರ್ಭವಾಗಿದೆ ಎಂದು ಹೇಳಿದರು.
“ನಾನು ಅಧ್ಯಕ್ಷ ಜೋ ಬೈಡೆನ್ ಅವರ ಆಹ್ವಾನದ ಮೇರೆಗೆ ಸೆಪ್ಟೆಂಬರ್ 22 ರಿಂದ ಸೆಪ್ಟೆಂಬರ್ 25, 2021 ರವರೆಗೆ ಯುಎಸ್ಎಗೆ ಭೇಟಿ ನೀಡುತ್ತಿದ್ದೇನೆ. ಭೇಟಿಯ ಸಮಯದಲ್ಲಿ, ನಾನು ಅಧ್ಯಕ್ಷ ಬೈಡೆನ್ ಜೊತೆ ಭಾರತ-ಯುಎಸ್ ಸಮಗ್ರ ಜಾಗತಿಕ ಕಾರ್ಯತಂತ್ರದ ಪಾಲುದಾರಿಕೆಯನ್ನು ಪರಿಶೀಲಿಸುತ್ತೇನೆ ಮತ್ತು ಪರಸ್ಪರ ಆಸಕ್ತಿಯ ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಬಗ್ಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳುತ್ತೇವೆ” ಎಂದು ತಿಳಿಸಿದ್ದಾರೆ.
“ಎರಡು ರಾಷ್ಟ್ರಗಳ ನಡುವಿನ ಸಹಕಾರದ ವಿಶೇಷವಾಗಿ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಅವಕಾಶಗಳನ್ನು ಅನ್ವೇಷಿಸಲು ನಾನು ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರನ್ನು ಭೇಟಿ ಮಾಡಲು ಎದುರು ನೋಡುತ್ತಿದ್ದೇನೆ” ಎಂದು ಅವರು ಹೇಳಿದ್ದಾರೆ.
ಕೋವಿಡ್-19 ಸಾಂಕ್ರಾಮಿಕ, ಭಯೋತ್ಪಾದನೆಯನ್ನು ಎದುರಿಸುವ ಅಗತ್ಯತೆ, ಹವಾಮಾನ ವೈಪರೀತ್ಯ ಮತ್ತು ಇತರೆ ಪ್ರಮುಖ ಸಮಸ್ಯೆಗಳನ್ನು ಒಳಗೊಂಡಂತೆ ಜಾಗತಿಕ ಸವಾಲುಗಳನ್ನು ಕೇಂದ್ರೀಕರಿಸುವ ವಿಶ್ವಸಂಸ್ಥೆಯ ಮಹಾಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡುವ ಮೂಲಕ ನಾನು ನನ್ನ ಪ್ರವಾಸವನ್ನು ಮುಕ್ತಾಯಗೊಳಿಸಲಿದ್ದೇನೆ.
ನನ್ನ ಈ ಅಮೆರಿಕಾ ಭೇಟಿ, ಅಮೆರಿಕಾದೊಂದಿಗಿನ ಸಮಗ್ರ ಜಾಗತಿಕ ಕಾರ್ಯತಂತ್ರ ಪಾಲುದಾರಿಕೆಯ ಬಲವರ್ಧನೆಗೆ ಮತ್ತು ನಮ್ಮ ಕಾರ್ಯತಂತ್ರ ಪಾಲುದಾರರಾದ ಜಪಾನ್ ಮತ್ತು ಆಸ್ಟ್ರೇಲಿಯಾದೊಂದಿಗಿನ ಸಂಬಂಧ ಬಲಪಡಿಸಲು ಮತ್ತು ಪ್ರಮುಖ ಜಾಗತಿಕ ಸಮಸ್ಯೆಗಳ ಕುರಿತು ನಮ್ಮ ಸಹಯೋಗವನ್ನು ಮುಂದುವರಿಸಲು ಒಂದು ಸುಸಂದರ್ಭವಾಗಿದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.