ಬೆಂಗಳೂರು: ಸರ್ಕಾರವೇ ಉಡುಪಿಯ ತಾಯಿ ಮತ್ತು ಮಗುವಿನ ಆಸ್ಪತ್ರೆಯನ್ನು ವ್ಯವಸ್ಥಿತವಾಗಿ ಅಭಿವೃದ್ಧಿ ಮಾಡಿ, ನಿರ್ವಹಣೆ ಮಾಡಲಿದೆ ಎಂದು ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.
ಈ ಆಸ್ಪತ್ರೆಯಲ್ಲಿ 70 ಹಾಸಿಗೆಗಳಿದ್ದು, ಅದನ್ನು 200 ಹಾಸಿಗೆಗಳಿಗೆ ಏರಿಸಿ ಅಭಿವೃದ್ಧಿ ಮಾಡಲು ಉದ್ಯಮಿಯೊಬ್ಬರು ಮುಂದಾಗಿದ್ದರು. ಆದರೆ ಕಾರಣಾಂತರಗಳಿಂದ ಅವರಿಂದ ಆ ಕೆಲಸ ನಡೆಯುತ್ತಿಲ್ಲ. ಈ ನಿಟ್ಟಿನಲ್ಲಿ ಆಸ್ಪತ್ರೆಯ ಎಲ್ಲಾ ವಿಚಾರಗಳನ್ನು ಸರ್ಕಾರವೇ ನೋಡಿಕೊಳ್ಳಲು ಚಿಂತನೆ ನಡೆಸಿದೆ ಎಂದು ಅವರು ಹೇಳಿದ್ದಾರೆ.
ಹಾಗೆಯೇ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಗಳ ಹೊಣೆಯನ್ನು ಸರ್ಕಾರವೇ ಹೊತ್ತುಕೊಳ್ಳಲು ಮನವಿ ಬಂದಿದ್ದು, ಈ ಹಿನ್ನೆಲೆಯಲ್ಲಿ ಸರ್ಕಾರವೇ ಆಸ್ಪತ್ರೆಗೆ ಸಂಬಂಧಿಸಿದಂತೆ ಎಲ್ಲಾ ವಿಚಾರಗಳನ್ನು ನೋಡಿಕೊಳ್ಳುತ್ತದೆ ಎಂದು ಸುಧಾಕರ್ ಭರವಸೆ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.