ಬೆಂಗಳೂರು: ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ವಿದೇಶದಲ್ಲಿ ಸ್ನಾತಕೋತ್ತರ ಪದವಿ ವಿದ್ಯಾಭ್ಯಾಸವನ್ನು ನಡೆಸಲು ಸಚಿವ ಶಿವರಾಮ ಹೆಬ್ಬಾರ್ ಅವರು ವಿಶೇಷ ಯೋಜನೆಯನ್ನು ಜಾರಿಗೊಳಿಸಿದ್ದಾರೆ.
ಈ ಯೋಜನೆ ಮೂಲಕವಾಗಿ ಕಟ್ಟಡ ಕಾರ್ಮಿಕರ ಮಕ್ಕಳ ಸ್ನಾತಕೋತ್ತರ ಪದವಿ ವಿದ್ಯಾಭ್ಯಾಸ ಸಂಪೂರ್ಣ ವೆಚ್ಚವನ್ನು ಕಾರ್ಮಿಕ ಇಲಾಖೆ ಭರಿಸಲಿದೆ ಎಂದು ಅವರು ತಿಳಿಸಿದ್ದಾರೆ. ಹಾಗೆಯೇ ಕಟ್ಟಡ ಕಾರ್ಮಿಕರಿಗೆ ಉಚಿತ ಬಸ್ಪಾಸ್ ವ್ಯವಸ್ಥೆಯನ್ನು ಮಾಡಲು ಯೋಜನೆಯನ್ನು ಕಾರ್ಯಗತಗೊಳಿಸುವುದಾಗಿ ಹೇಳಿದ್ದಾರೆ.
ಜೊತೆಗೆ ರಾಜ್ಯದಲ್ಲಿ 100 ಶಿಶುಪಾಲನಾ ಕೇಂದ್ರ ಸ್ಥಾಪಿಸುವ ಯೋಜನೆಯನ್ನು ಪ್ರಾದೇಶಿಕವಾರು ಅನುಷ್ಠಾನ ಮಾಡುವ ಸಂಬಂಧ ಅಧಿಕಾರಿಗಳ ಜೊತೆ ಚರ್ಚಿಸಲಾಯಿತು. ಫುಡ್ ಕಿಟ್, ಸುರಕ್ಷಾ ಕಿಟ್, ನ್ಯೂಟ್ರಿಷನ್ ಕಿಟ್ ನೀಡುವ ಸಂಬಂಧವೂ ಸಚಿವರು ಅಧಿಕಾರಿಗಳ ಜೊತೆಗೆ ಮಾತುಕತೆ ನಡೆಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.